ಆಂಧ್ರಪ್ರದೇಶ: ಜಿಲ್ಲೆಯ ಕೋನಸೀಮಾ ಎಂಬಲ್ಲಿ ಹಿಂಸಾಚಾರ ನಡೆದಿದ್ದು, ಆ ಹಿಂಸಾಚಾರದಲ್ಲಿ ಒಬ್ಬರ ಪ್ರಾಣ ಹೋಗಿದೆ. ಹತ್ತಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋನಸೀಮಾ ಗ್ರಾಮಕ್ಕೆ ಅಂಬೇಡ್ಕರ್ ಹೆಸರನ್ನು ಇಡಲಾಗಿದೆ. ಈ ಹೆಸರನ್ನೇ ವಿರೋಧಿ ಅಮಾಲಾಪುರಂನಲ್ಲಿ ಹಿಂಸಾಚಾರ ನಡೆಸಿದ್ದಾರೆ. ಈ ಹಿಂಸಾಚಾರದಲ್ಲಿ ಪೊಲೀಸರಿಗೂ ಗಾಯಗಳಾಗಿವೆ. ಅಷ್ಟೇ ಅಲ್ಲ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪರಿಸ್ಥಿತಿ ಸುಧಾರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಅಹಲಾಪುರದಲ್ಲಿ ನಡೆದ ಘಟನೆ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಅಲ್ಲಿನ ಸರ್ಕಾರ ತಿಳಿಸಿದೆ.
ಈ ಸಂಬಂಧ ಮಾತನಾಡಿರುವ ಆಂಧ್ರ ಪ್ರದೇಶ ಗೃಹ ಸಚಿವರು, ಕೋನಸೀಮಾ ಜಿಲ್ಲೆಗೆ ಅಂಬೇಡ್ಕರ್ ಹೆಸರಿಡಲಾಗಿದೆ. ಅಂಬೇಡ್ಕರ್ ಹೆಸರನ್ನು ವಿರೋಧಿಸುವುದು ಸರಿಯಲ್ಲ. ಇದೆ ಹಿಂದೆ ಟಿಡಿಪಿ ಮತ್ತು ಜನಸೇನಾ ಪಕ್ಷಗಳ ಕೈವಾಡವಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.