Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ಸಿಎಂಗೆ ಅನಿರುದ್ಧ್ ಮನವಿ

---Advertisement---

ಬೆಂಗಳೂರು: ಡಾ.ವಿಷ್ಣುವರ್ಧನ್ ಲೆಜೆಂಡರಿ ನಟರಲ್ಲಿ ಒಬ್ಬರು. ಅವರಿಗೆ ಸಿಗಬೇಕಾದ ಹಲವು ಗೌರವಗಳು ಸಿಗಲೇ ಇಲ್ಲ ಎಂಬುದು ಅಭಿಮಾನಿಗಳಿಗೆ ಈಗಲೂ ಬೇಸರವಿದೆ. ಇದೀಗ ವಿಷ್ಣುದಾದ ಅಳಿಯ ಅನಿರುದ್ಧ್ ಸರ್ಕಾರದ ಬಳಿ ಮನವಿಯೊಂದನ್ನ ಮಾಡಿದ್ದಾರೆ. ಡಾ.ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ಕೇಳಿದ್ದಾರೆ.

 

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಮನವಿ ಪತ್ರವನ್ನು ನೀಡಿದ್ದಾರೆ. ನಾನು ಈ ಪತ್ರವನ್ನು ಸಾಹಸಸಿಂಹ ಎಂದು ಹೆಮ್ಮೆಯಿಂದ ಕರೆಯಲ್ಪಡುವ, ಕನ್ನಡಿಗರ ಹೃದಯ ಸಿಂಹಾಸನದಲ್ಲಿ ಸದಾ ಸ್ಥಾನ ಪಡೆದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್ ಅವರ ಕೋಟ್ಯಾಂತರ ಅಭಿಮಾನಗಳ ಪರವಾಗಿ, ಗೌರವದೊಂದಿಗೆ ಹಾಗೂ ಹೃದಯಪೂಋವಕ ಮನವಿಯೊಂದಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ.

ಕನ್ನಡ ಚಲನಚಿತ್ರರಂಗಕ್ಕೂ ಹಾಗೂ ನಮ್ಮ ರಾಜ್ಯದ ಸಾಂಸ್ಕೃತಿಕ ಪರಂಪರೆಗೂ ಅವರು ನೀಡಿರುವ ಕೊಡುಗೆ ಅಪರೂಪ ಹಾಗೂ ಅಪಾರ. ಅವರು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸಿದ ರೀತಿ ಕೂಡ ಅನೇಕರಿಗೆ ಪ್ರೇರಣೆಯಾಗಿದೆ. ಅವರು ನಾಯಕ ನಟರಾಗಿ 225ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ, ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅವರು ನಮ್ಮನ್ನು ಭೌತಿಕವಾಗಿ ಅಗಲಿ 15 ವರ್ಚಗಳು ದಾಟಿದ್ದರು, ಜನರ ಹೃದಯದಲ್ಲಿ ಅವರು ಹೊಂದಿರುವ ಸ್ಥಾನ ಅಚಲವಾದದ್ದು. ಆದರೆ ಇದುವರೆಗೂ ಭಾರತ ಸರ್ಕಾರದಿಂದ ಅವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ದೊರೆತಿಲ್ಲ. ನಮ್ಮ ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ ಕರ್ನಾಟಕ ರತ್ನ ಪ್ರಶಸ್ತಿ ಕೂಡ ಸಿಕ್ಕಿಲ್ಲ. ಹೀಗಾಗಿ ಕನಿಷ್ಠ ಪಕ್ಷ ಮರಣೋತ್ತರವಾಗಿಯಾದರೂ ಇವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ಕೋರಿ ಅನಿರುದ್ದ್ ಪತ್ರವನ್ನ ಬರೆದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment