in ,

ಮಹಿಳೆಯರ ಸಾಲ ಮನ್ನಾ ಮಾಡೋದಾಗಿ ಅನಿತಾ ಕುಮಾರಸ್ವಾಮಿ ಭರವಸೆ..!

suddione whatsapp group join

 

ರಾಮನಗರ: 2023 ರ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಈಗಾಗ್ಲೇ ಸಿದ್ಧತೆ ನಡೆಸುತ್ತಿವೆ. ಜೆಡಿಎಸ್ ಕೂಡ ಪೂರ್ಣ ಪ್ರಮಾಣದಲ್ಲಿ ಗೆಲ್ಲಲೇಬೇಕು ಎಂಬ ಹಠ ತೊಟ್ಟಿದೆ. ಈ ಬಾರಿ ಶಾಸಕಿ ಅನಿತಾ ಕುಮಾರಸ್ವಾಮಿ ಮಹಿಳೆಯರಿಗೆ ಭರವಸೆ ಕೊಟ್ಟಿದ್ದಾರೆ.

ಜನತಾ ಪರ್ವದಲ್ಲಿ ಭಾಗವಹಿಸಿದ್ದ ಅನಿತಾ ಕುಮಾರಸ್ವಾಮಿ ಮಹಿಳೆಯರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದಾರೆ. ಪತಿ ಅಧಿಕಾರದಲ್ಲಿದ್ದಾಗ ರೈತರ ಸಾಲಮನ್ನಾ ಮಾಡಿದ್ರು.
ಈ ಬಾರಿ ಸಂಪೂರ್ಣ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಸಾಲ ಮನ್ನಾ ಮಾಡೋದಾಗಿ ಹೇಳಿದ್ದಾರೆ.


ಮಹಿಳಾ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಸಾಲ ಮನ್ನಾ ಮಾಡಿ ಎಂದು  ಕೇಳುತ್ತಿದ್ದಾರೆ. ಕಷ್ಟದಲ್ಲಿ ಇರುವ ಮಹಿಳೆಯರ ನೆರವಿಗೆ ಧಾವಿಸಬೇಕು. ಮಹಿಳೆಯರಿಗೆ ವಿಶೇಷವಾದ ಕಾರ್ಯಕ್ರಮ ಕೊಡಿ. ಇದು ನಾನು ಕುಮಾರಸ್ವಾಮಿ ಅವರಿಗೆ ನೀಡುವ ಮುಖ್ಯವಾದ ಸಲಹೆ. ರೈತರು ಮಾಡಿದ ಸಾಲ ಮನ್ನಾ ಕ್ರಾಂತಿಕಾರಿ ಕ್ರಮ. ಹಾಗೆಯೇ ಕುಟುಂಬ ನಿರ್ವಹಣೆಗೆ, ಮಕ್ಕಳ ಶಿಕ್ಷಣಕ್ಕೆ ಮಹಿಳೆಯರು ಸಾಲ ಮಾಡಿಕೊಂಡಿದ್ದಾರೆ. ಮುಂದೆ ನೀವು ಅಧಿಕಾರಕ್ಕೆ ಬಂದರೆ ಅಂತಹ ಮಹಿಳೆಯರ ಸಾಲವನ್ನೂ ಮನ್ನಾ ಮಾಡಿ. ಪಂಚರತ್ನ ಯೋಜನೆ ರೂಪಿಸುವ ಯೋಚನೆ ಶ್ಲಾಘನೀಯ. ಇದರ ಜತೆಗೆ ಉಚಿತ ಶಿಕ್ಷಣ ನೀಡಿದರೆ ಸಮಾಜಕ್ಕೆ, ರಾಜ್ಯಕ್ಕೆ ಇನ್ನೂ ಒಳ್ಳೆಯದು ಎಂದರು.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಖಾಯಂ ಆಯ್ತು ಗಲ್ಲು ಶಿಕ್ಷೆ..!

539 ಹೊಸ ಸೋಂಕಿತರು.. 17 ಜನ ಸಾವು..!