ತಮಿಳುನಾಡಿನಲ್ಲಿ ಆಡಿದ ಒಂದೇ ಒಂದು ಮಾತಿಗೆ ಕೆರಳಿದ ಅಣ್ಣಾಮಲೈ ; ಅಂಥದ್ದೇನಿಳಿದ್ರು ಡಿಕೆಶಿ..?

ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ತಮಿಳುನಾಡಿನ ಬಿಜೆಪಿಯ ರಾಜ್ಯಾಧ್ಯಕ್ಷ ಅಣ್ಣಾಮಲೈ ನಡುವೆ ಜೋರು ಗದ್ದಲ ಎದ್ದಿದೆ. ಸುದ್ದಿಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ಆಡಿದ ಒಂದೇ ಒಂದು ಮಾತಿಗೆ ಕರಳಿ ಕೆಂಡವಾಗಿದ್ದಾರೆ. ಹಾಗಾದ್ರೆ ಡಿಸಿಎಂ ಡಿಕೆ ಶಿವಕುಮಾರ್ ಅಂತದ್ದೇನಂದ್ರು ಎಂಬ ಮಾಹಿತಿ ಇಲ್ಲಿದೆ.

ಡಿಸಿಎಂ ಡಿಕೆ ಶಿವಕುಮಾರ್ ಚೆನ್ನೈಗೆ ಭೇಟಿ ನೀಡಿದ್ದಾರೆ. ಲೋಕಸಭಾ ಕ್ಷೇತ್ರಗಳ ಮರುವಿಂಗಡನೆಯಲ್ಲಿ ದಕ್ಷಿಣ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾಗುತ್ತಿದೆ. ಈ ಅನ್ಯಾಯದ ನಡೆಗಳನ್ನು ಖಂಡಿಸಲು ಇಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರು ಕೂಡ ಪಾಲ್ಗೊಂಡಿದ್ದಾರೆ. ಈ ಸಭೆಯಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಒಟ್ಟು 14 ರಾಜ್ಯಗಳ ನಾಯಕರು ಭಾಗವಹಿಸಿದ್ದಾರೆ. ಈ ಸಭೆ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಣ್ಣಾಮಲೈ ಬಗ್ಗೆಯೂ ಮಾತನಾಡಿದ್ದಾರೆ. ಇದೇ ವಿಚಾರಕ್ಕೆ ಈಗ ಅಣ್ಣಾಮಲೈ ಹಾಗೂ ಡಿಕೆ ಶಿವಕುಮಾರ್ ನಡುವೆ ಮಾತಿನ ಸಮರ ಏರ್ಪಟ್ಟಿದೆ.

ಅಣ್ಣಾ ಮಲೈ ನಮ್ಮ ರಾಜ್ಯದಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು. ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಪೂರ್ ಮ್ಯಾನ್ (ಬಡ ವ್ಯಕ್ತಿ). ಅಣ್ಣಾಮಲೈಗೆ ನಮ್ಮ ಶಕ್ತಿ ಏನು ಎಂಬುದು ಗೊತ್ತು. ನನ್ನನ್ನ ಬಿಜೆಪಿ ತಿಹಾರ್ ಜೈಲಿಗೆ ಕಳುಹಿಸಿದ್ದಾಗಲೇ ನಾನು ಹೆದರಲಿಲ್ಲ. ಈಗ ಕಪ್ಪು ಬಾವುಟಕ್ಕೆ ಹೆದರುತ್ತೀನಾ..? ಬಿಜೆಪಿಯವರ ಕಪ್ಪು ಬಾವುಟವನ್ನು ಸ್ವಾಗತಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಲ್ಲಿ ಪೂರ್ ಮ್ಯಾನ್ ಎಂಬ ಹೇಳಿಕೆಗೆ ಆಕ್ರೋಶ ಭುಗಿಲೆದ್ದಿದೆ.

Share This Article
Leave a Comment

Leave a Reply

Your email address will not be published. Required fields are marked *