ಅಣ್ಣಾಮಲೈ ಅಂದ್ರೆನೇ ಅದೆಷ್ಟೋ ಜನ ಗಢಗಢ ಅಂತ ನಡುಗುತ್ತಾ ಇದ್ದರು. ಕರ್ನಾಟಕದ ರಿಯಲ್ ಸಿಂಗಂ ಆಗಿ ಘರ್ಜಿಸಿದ್ದರು. ಆದರೆ ಬಿಜೆಪಿಗೆ ಸೇರಿ ರಾಜಕೀಯ ಪ್ರವೇಶಿಸಿದರು. ತಮಿಳುನಾಡಿದ ಬಿಜೆಪಿ ರಾಜ್ಯಾಧ್ಯಕ್ಷರು ಆಗಿದ್ದರು. ಇದೀಗ ಆ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.
ಬಿಜೆಪಿಯ ಹೈಕಮಾಂಡ್ ಸೂಚನೆಯ ಮೇರೆಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದಾನೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಸುದ್ದಿಯೇ ಹರಿದಾಡುತ್ತಿತ್ತು. ಕಳೆದ ಎರಡು ದಿನಗಳಿಂದ ರಾಜೀನಾಮೆ ನೀಡುವುದು ಪಕ್ಕ ಎಂಬ ವಿಚಾರ ಹಬ್ಬಿತ್ತು. ಇದೀಗ ಅದು ನಿಜವಾಗಿದೆ. ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ ರಾಜೀನಾಮೆಯನ್ನು ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆದ ಸಭೆಯಲ್ಲಿ ಅಣ್ಣಾಮಲೈ ಅವರಿಗೆ ನಿರ್ಧಾರವನ್ನು ತಿಳಿಸಲಾಗಿತ್ತು ಎನ್ನಲಾಗಿದೆ. ಅವರ ಸೂಚನೆ ಮೇರೆಗೆ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗೆ ಇಳಿದಿದ್ದಾರೆ.
ರಾಜೀನಾಮೆ ನೀಡಿದರ ಬಗ್ಗೆ ಮಾತನಾಡಿದ ಅಣ್ಣಾಮಲೈ, ಈಗ ನಾನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷನಲ್ಲ. ಆದರೆ ತಮಿಳುನಾಡಿನಲ್ಲಿ ಜೀವ ಕೊಟ್ಟು ಬಿಜೆಪಿ ಪಕ್ಷವನ್ನು ಬೆಳೆಸಿದ್ದೇನೆ. ಮುಂದಿನ ರಾಜ್ಯಾಧ್ಯಕ್ಷ ಯಾರಾಗಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಯಾರನ್ನು ಸೂಚಿಸಿಲ್ಲ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ರೇಸ್ ನಲ್ಲಂತೂ ನಾನಿಲ್ಲ. ಈ ಮಣ್ಣನ್ನ ಬಿಟ್ಟು ನಾನು ಎಲ್ಲಿಗೂ ಹೋಗಲ್ಲ. ಯಾಕಂದ್ರೆ ಈ ಪಕ್ಷದಲ್ಲಿ ಎಲ್ಲಾ ಒಳ್ಳೆಯವರೇ ಇದ್ದಾರೆ. ಈ ಪಕ್ಷಕ್ಕೆ ಸಾಕಷ್ಟು ಜನ ಉಸಿರು ಕೊಟ್ಟಿದ್ದಾರೆ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷರ ಆಯ್ಕೆ ಮಾಡುವಾಗ ಇನ್ನಷ್ಟು ಮಾತನಾಡುತ್ತೇನೆ ಎಂದಿದ್ದಾರೆ.
ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಸಚುವ ಮಧು ಬಂಗಾರಪ್ಪ ಅವರು ಫಲಿತಾಂಶವನ್ನು ಪ್ರಕಟ ಮಾಡಿ, ಫೇಲ್ ಆದ ಮಕ್ಕಳಿಗೆ…
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 08 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಮಂಗಳವಾರ, ಏಪ್ರಿಲ್. 08)ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ…
ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ಉಡುಪಿ ಮೊದಲ ಸ್ಥಾನ ಪಡೆದಿದ್ದರೆ, ಯಾದಗಿರಿ ಕೊನೆಯ ಸ್ಥಾನ…
ಬಳ್ಳಾರಿ, ಏ.08 : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 220/11ಕೆವಿ ಅಲ್ಲಿಪುರ್ ವಿದ್ಯುತ್ ಫೀಡರ್‌ನಲ್ಲಿ ವಿದ್ಯುತ್…
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನ ತತ್ತರಿಸಿ ಹೋಗಿದ್ದಾರೆ. ಇದೀಗ ಗೃಹ ಬಳಕೆ ಅನಿಲ ಕೂಡ ಬೆಲೆ ಏರಿಕೆಯಾಗಿದೆ.…
ಬೆಂಗಳೂರು; ಪರೀಕ್ಷೆ ಬರೆದು ಫಲಿತಂಶಕ್ಕಾಗಿ ಕಾಯುತ್ತಿರುವ ದ್ವಿತೀಯ ಪಿಯುಸಿ ಮಕ್ಕಳಿಗೆ ಇಂದು ಢವಢವ ಶುರುವಾಗಿದೆ. ಎಷ್ಟೇ ಚೆನ್ನಾಗಿ ಬರೆದಿದ್ದರು, ನಿರೀಕ್ಷೆ…