ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಹಿರಿಯೂರು, ನವೆಂಬರ್. 07 : ಸರ್ಕಾರ ಕೂಡಲೇ ರೈತರ ಕಬ್ಬಿಗೆ 3500 ರೂಪಾಯಿ ನಿಗದಿ ಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ನೇತೃತ್ವದಲ್ಲಿ ಗ್ರೇಡ್ -2 ತಹಶೀಲ್ದಾರ್ ಸಿಜೆ ಕೃಷ್ಣಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಾಂ ಜಿಲ್ಲೆಯ ಕುರ್ಲಾಪುರ್ ಕ್ರಾಸ್ ಬಳಿ ರೈತ ಸಂಘದ ಹಾಗೂ ವಿವಿಧ ಸಂಘಟನೆಗಳು ಕಳೆದೊಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು ಬೆಳೆದ ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಬೇಡಿಕೆಯನ್ನು ಈಡೇರಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಸಗೊಬ್ಬರ ಕೀಟನಾಶಕ ಮತ್ತು ರೈತರ ಬಳಸುವ ಪರಿಕರಗಳ ಬೆಲೆ ದುಬಾರಿಯಾಗಿದೆ. ಇದರಿಂದ ಬಹುತೇಕ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವ ದಾರಿ ಹಿಡಿದಿದ್ದಾರೆ. ಒಂದು ಟನ್ ಕಬ್ಬಿನಿಂದ ಅನೇಕ ಉತ್ಪನ್ನಗಳ ಮೂಲಕ ಸರ್ಕಾರಗಳಿಗೆ ಬಹುದೊಡ್ಡ ಆದಾಯ ಬರುತ್ತದೆ. ಆದರೆ ಕಬ್ಬು ಬೆಳೆದ ರೈತರಿಗೆ ನಾನಾ ರೀತಿಯ ಮೋಸಗಳು ನಿರಂತರವಾಗಿ ನಡೆಯುತ್ತಿವೆ. ಈ ಹೋರಾಟದಲ್ಲಿ ತೊಡಗಿರುವ ರೈತರು ಸರ್ಕಾರದ ಮುಂದೆ ಇಟ್ಟಿರುವ ಎಲ್ಲಾ ಬೇಡಿಕೆಗಳನ್ನ ಗಂಭೀರವಾಗಿ ಪರಿಗಣಿಸಿ, ರೈತರ ಬೇಡಿಕೆಗಳನ್ನ ಈಡೇರಿಸಬೇಕು ಎಂದು ಜಿಲ್ಲಾಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಆಲೂರು ಸಿದ್ದರಾಮಣ್ಣ, ಅರಳಿಕೆರೆ ತಿಪ್ಪೇಸ್ವಾಮಿ, ಈರಣ್ಣ, ದೊರೆ ಸ್ವಾಮಿ, ರಾಮಣ್ಣ, ರಾಮಕೃಷ್ಣಪ್ಪ, ಬಾಲಕೃಷ್ಣ, ಬಿ ಆರ್ ರಂಗಸ್ವಾಮಿ, ತಿಮ್ಮಯ್ಯ, ಲಕ್ಷ್ಮಣ, ತಿಪ್ಪೇಸ್ವಾಮಿ, ರವಿಕುಮಾರ್, ಶಶಿಧರ, ಮಂಜುನಾಥ್, ರಾಮಣ್ಣ, ಕರಿಯಪ್ಪ, ಗೋವಿಂದಪ್ಪ, ಸೇರಿದಂತೆ ಮುಂತಾದವರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್