ಮೈಸೂರು: ಉಪಚುನಾವಣೆಯ ಕಣದಲ್ಲಿ ಕಾಂಗ್ರೆಸ್ ಇದೀಗ ಸಂಡೂರು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಶಿಗ್ಗಾಂವಿ ಹಾಗೂ ಚನ್ನಪಟ್ಟಣವನ್ನು ಬಾಕಿ ಉಳಿಸಿಕೊಂಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದಿಂದ ಇ ತುಕಾರಂ ಗೆಲುವು ಸಾಧಿಸಿದ್ದರು. ಇದೀಗ ಅವರ ಪತ್ನಿಗೆ ಟಿಕೆಟ್ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರೇ ಟಿಕೆಟ್ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಈ ಹೇಳಿಕೆ ನೀಡಿದ್ದಾರೆ. ಈ ಮೊದಲೇ ತುಕಾರಂ ಅವರ ಪತ್ನಿ ಅಥವಾ ಮಗಳಿಗೆ ಟಿಕೆಟ್ ನೀಡುವುದಾಗಿ ಮಾತುಗಳು ಕೇಳಿಬಂದಿದ್ದವು. ಇದೀಗ ಅವರ ಪತ್ನಿಗೆ ಟಿಕೆಟ್ ನೀಡಲಾಗಿದೆ. ಈ ವೇಳೆ ಚನ್ನಪಟ್ಟಣದ ಅಭ್ಯರ್ಥಿ ಬಗ್ಗೆಯೂ ಮಾತನಾಡಿದ ಸಿದ್ದರಾಮಯ್ಯ ಅವರು, ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಚರ್ಚೆಯಾಗಿದೆ. ಡಿಕೆ ಸುರೇಶ್ ಕೂಡ ಪ್ರಬಲ ಅಭ್ಯರ್ಥಿಯಾಗಿದ್ದಾರೆ. ಒಂದೆರಡು ದಿನದಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ ಎಂದಿದ್ದಾರೆ.
ಕಾಂಗ್ರೆಸ್ಸಿನ ಸಿದ್ದಾಂತ ಹಾಗೂ ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದು ಸಿಪಿ ಯೋಗೀಶ್ವರ್ ಕಾಂಗ್ರೆಸ್ ಗೆ ಸೇರುತ್ತಾರಾ ಎಂಬುದರ ಬಗ್ಗೆ ಮಾತನಾಡಿದ್ದಾರೆ. ಇನ್ನು ಸಿಪಿ ಯೋಗೀಶ್ವರ್ ಅವರು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಅವರು ಕಾಂಗ್ರೆಸ್ ಗೆ ಸೇರ್ಪಡೆ ಆಗುತ್ತಾರೆ ಎಂಬ ವದಂತಿಗಳು ಹಬ್ಬಿದೆ. ಆದರೆ ಸಿಪಿ ಯೋಗೀಶ್ವರ್ ಮಾತ್ರ ಯಾವುದನ್ನು ಇನ್ನು ಅಧಿಕೃತಗೊಳಿಸಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುತ್ತಾರಾ..? ಕಾಂಗ್ರೆಸ್ ಸೇರುತ್ತಾರಾ..? ಕಾಂಗ್ರೆಸ್ ಸೇರಿದರು ಅಲ್ಲಿ ಅವಕಾಶ ಸಿಗುತ್ತಾ..? ಎಂಬೆಲ್ಲಾ ವಿಚಾರಗಳಿಗೂ ಶೀಘ್ರದಲ್ಲಿಯೇ ಉತ್ತರ ಸಿಗಲಿದೆ.