ವಾರ್ಷಿಕ ಪರೀಕ್ಷೆ : ವಾಸವಿ ಶಾಲಾ ಮಕ್ಕಳಿಂದ ಜಾಥಾ

1 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 14 : ಹತ್ತನೆ ತರಗತಿ ವಾರ್ಷಿಕ ಪರೀಕ್ಷೆ ಮತ್ತು ಪ್ರಾಥಮಿಕ ಶಾಲೆಯ ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ಪ್ರತಿದಿನ ಸಂಜೆ ಏಳು ಗಂಟೆಯಿಂದ ರಾತ್ರಿ 9 ರತನಕ ಮನೆಗಳಲ್ಲಿ ಮೊಬೈಲ್ ಫೋನ್ ಹಾಗೂ ಟಿ.ವಿ.ಗಳನ್ನು ಆಫ್ ಮಾಡಿ ಮಕ್ಕಳ ಓದಿಗೆ ಪೂರಕ ವಾತಾವರಣ ಕಲ್ಪಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿರುವುದರಿಂದ ವಾಸವಿ ಆಂಗ್ಲ ಮತ್ತು ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳು ಶನಿವಾರ ಜಾಥಾ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು.

 

ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಸತ್ಯನಾರಾಯಣಶೆಟ್ಟಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡುತ್ತ ಪರೀಕ್ಷೆ ಸಮಯದಲ್ಲಿ ಮಕ್ಕಳು ಮೊಬೈಲ್ ಹಾಗೂ ಟಿ.ವಿ.ಯಿಂದ ದೂರವಿದ್ದು, ಓದಿನ ಕಡೆ ಹೆಚ್ಚು ಗಮನ ಕೊಡಬೇಕು. ಇದಕ್ಕೆ ಮನೆಯಲ್ಲಿ ಪೋಷಕರುಗಳು ಎರಡು ಗಂಟೆಗಳ ಕಾಲ ಸಹಕರಿಸುವಂತೆ ಮನವಿ ಮಾಡಿದರು.
ದೊಡ್ಡಪೇಟೆ, ರಂಗಯ್ಯನಬಾಗಿಲು, ಹಳೆ ಮಾಧ್ಯಮಿಕ ಶಾಲೆ ರಸ್ತೆ, ಧರ್ಮಶಾಲಾ ರೋಡ್‍ನಲ್ಲಿ ಜಾಥಾ ಸಂಚರಿಸಿತು.

 

ವಾಸವಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಅಜಯ್‍ಕುಮಾರ್, ಮುಖ್ಯೋಪಾಧ್ಯಾಯರುಗಳಾದ ಅಶೋಕ್‍ಕುಮಾರ್, ರಾಧಮಣಿ, ದೈಹಿಕ ಶಿಕ್ಷಕ ಸುರೇಶ್‍ಬಾಬು ಇವರುಗಳು ಜಾಥದಲ್ಲಿ ಪಾಲ್ಗೊಂಡಿದ್ದರು.

Share This Article
Enable Notifications OK No thanks