ರಾಜ್ಯ ಸರ್ಕಾರದಿಂದ ಕಳುಹಿಸಿದ್ದ ಮತ್ತೊಂದು ವಿಧೇಯಕ ವಾಪಸ್ ಕಳುಹಿಸಿದ ರಾಜ್ಯಪಾಲರು..!

1 Min Read

 

ಬೆಂಗಳೂರು; ರಾಜ್ಯಪಾಲರು ಇದೀಗ ರಾಜ್ಯ ಸರ್ಕಾರ ನೀಡಿದ್ದ ಮತ್ತೊಂದು ವಿಧೇಯಕವನ್ನು ವಾಪಾಸ್ ಕಳುಹಿಸಿದ್ದಾರೆ. ಇದು ಚರ್ಚೆಗೆ ಗ್ರಾಸವಾಗಿದೆ. ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಒಟ್ಟು ಮೂರು ಮಸೂದೆಗಳಿಗೆ ಸಹಿ ಹಾಕದೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರಕ್ಕೆ ವಾಪಾಸ್ ಕಳುಹಿಸಿದ್ದಾರೆ. ಈ ತಿದ್ದುಪಡಿಯು ದಾರಿ ತಪ್ಪಿಸುವಂತಿದೆ. ಬದಲಾವಣೆ ತರುವ ಉದ್ದೇಶಕ್ಕಿಂತಲೂ ಅಧಿಕಾರ ಕಿತ್ತುಕೊಳ್ಳುವ ಯತ್ನವಾಗಿದೆ ಎಂದಿದ್ದಾರೆ.

 

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಮಸೂದೆಯನ್ನು ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ಈ ಮಸೂದೆ ಪ್ರಕಾರ ವಿಶ್ವವಿದ್ಯಾಲಯಗಳಿಗೆ ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಲಿದ್ದಾರೆ. ವಿಶ್ವವಿದ್ಯಾಲಯದ ಎಲ್ಲಾ ನೇಮಕಾತಿ, ಆಡಳಿತಾತ್ಮಕ ಅಧಿಕಾರಿಗೆ, ಮುಖ್ಯಮಂತ್ರಿಗೆ ಇರಲಿದೆ. ಈ ಮೂಲಕ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲಾಗುತ್ತದೆ.

ರಾಜ್ಯಪಾಲರು ಇಂದು, ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024, ಮೈಸೂರು ಪ್ರಾಧಿಕಾರ ಮಸೂದೆ -2024, ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ಮಸೂದೆ -2024ಕ್ಕೆ ಸಹಿ ಹಾಕದೆ ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ. ಕಳೆದ ಬಾರಿ ಮೈಕ್ರೋ ಫೈನಾನ್ಸದ ಕಂಪನಿಗಳ ಹಾವಳಿಗೆ ಬ್ರೇಕ್ ಹಾಕಲು ತಂದಿದ್ದ ಮಸೂದೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದರು. ತಿದ್ದುಪಡಿ ಮಾಡಲು ಸೂಚನೆ ನೀಡಿದ್ದರು. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾದ ಬೆನ್ನಲ್ಲೇ ಮತ್ತೆ ತಿದ್ದುಪಡಿ ಮಾಡಿ ಕಳುಹಿಸಲಾಗಿತ್ತು. ಬಳಿಕ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್ ಸಿಕ್ಕಿತ್ತು.

Share This Article
Leave a Comment

Leave a Reply

Your email address will not be published. Required fields are marked *