Connect with us

Hi, what are you looking for?

ಪ್ರಮುಖ ಸುದ್ದಿ

ತೆಲುಗು ಸೀರಿಯಲ್ ನಲ್ಲಿ ಕನ್ನಡದ ಮತ್ತೊಬ್ಬ ಖ್ಯಾತ ನಟಿ….! ರಾಯಲ್ ಫ್ಯಾಮಿಲಿಯ ರಾಯಲ್ ಲುಕ್ ನಲ್ಲಿ ಮಲೆನಾಡ ಬೆಡಗಿ….!

ಕನ್ನಡದ ಅದೆಷ್ಟೂ ಪ್ರತಿಭಾನ್ವಿತ ಕಲಾವಿದರು ಇಂದು ಪರಭಾಷೆಗಳಲ್ಲಿ ಮಿಂಚುತ್ತಿದ್ದಾರೆ. ಅದ್ರಲ್ಲೂ ಸೌತ್ ಇಂಡಸ್ಟ್ರೀಯಲ್ಲಿ ಹೆಚ್ಚಾಗಿ ಕನ್ನಡದ ನಟಿಮಣಿಯರ ಹವಾ ಜೋರಾಗಿದೆ. ಇದೀಗ ಕನ್ನಡದ ಮತ್ತೊಬ್ಬ ಖ್ಯಾತ ನಟಿ ತೆಲುಗು ಇಂಡಸ್ಟ್ರೀಗೆ ಕಾಲಿಟ್ಟಿದ್ದಾರೆ. ಹಾಗಂತ ಅವರಿಗೆ ತೆಲುಗು ಚಿತ್ರರಂಗ ಹೊಸದಲ್ಲ ಎರಡು ಸಿನಿಮಾಗಳನ್ನು ಮಾಡಿರುವ ಅವರು ಇದೀಗ ತೆಲುಗು ಧಾರಾವಾಹಿಯಲ್ಲಿ ಸಖತ್ ಆಗಿ ಮಿಂಚಿದ್ದಾರೆ. ಅವರೇ ನಟಿ ಮೇಘಾಶ್ರೀ.

ಇವಳು ಸುಜಾತಾ, ಕೃಷ್ಣ ತುಳಸಿ, ನಾಗಕನ್ನಿಕೆ ಸೀರಿಯಲ್, ರವಿಚಂದ್ರನ್ ನಟನೆಯ ದಶರಥ , ಚಿರಂಜೀವಿ ಸರ್ಜಾ ನಟನೆಯ ರಾಜಾ ಮಾರ್ತಾಂಡ, ರಿದಂ ಸೇರಿದಂತೆ ಸಾಕಷ್ಟು ಸಿನಿಮಾ ಹಾಗೂ ಸೀರಿಯಲ್ ಗಳಲ್ಲಿ ಮಿಂಚುತ್ತಿರುವ ಅದ್ಭುತ ಕಲಾವಿದೆ ಮಲೆನಾಡಿ ಬೆಡಗಿ ಮೇಘಶ್ರೀ ಅಭಿಮಾನಿಗಳಿಗೆ ಗುಡ್ ನ್ಯೂಸ್ ವೊಂದನ್ನು ಕೊಟ್ಟಿದ್ದಾರೆ. ಕಿರುತೆರೆ, ಬೆಳ್ಳಿತೆರೆ ಎರಡರಲ್ಲೂ ಮಿಂಚುತ್ತಿರುವ ನಟಿ ಮೇಘಾಶ್ರೀ ಇದೀಗ ಪರಭಾಷಾ ಇಂಡಸ್ಟ್ರೀಗೂ ಕಾಲಿಟ್ಟಿದ್ದಾರೆ. ಟಾಲಿವುಡ್, ಕಾಲಿವುಡ್ ನಲ್ಲೂ ಮ್ಯಾಜಿಕ್ ಮಾಡೋದಿಕ್ಕೆ ರೆಡಿಯಾಗಿದ್ದಾರೆ. ಅದಕ್ಕಾಗಿಯೇ ಬಿಲ್ಲು, ಬಾಣ ತೊಟ್ಟು, ರಾಯಲ್ ಲುಕ್ ನಲ್ಲಿ ಫೋಸ್ ಕೊಟ್ಟಿರುವ ನಟಿ ಮೇಘಾಶ್ರೀ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅದು‘ಜ್ಯೋತಿʼ ಹೆಸರಿನ ಬಹುಭಾಷೆ ಸೀರಿಯಲ್ ಸಮಾಚಾರ. ರಾಜ್ ಕಪೂರ್ ಇದರ ನಿರ್ದೇಶಕರಾಗಿ, ಹೆಸರಾಂತ ನಟಿ ಖುಷ್ಬೂ ಇದರ ನಿರ್ಮಾಪಕರಾಗಿದ್ದಾರಂತೆ. ಕನ್ನಡ, ತಮಿಳು ಹಾಗೂ ತೆಲುಗು ಸೇರಿದಂತೆ ಐದು ಭಾಷೆಯಲ್ಲಿ ಈ ಸೀರಿಯಲ್ ತರಬೇಕು ಎಂಬ ಪ್ಲ್ಯಾನ್ ಇತ್ತಂತೆ. ಆದ್ರೆ ಅದೇನಾಯ್ತೋ ಗೊತ್ತಿಲ್ಲ. ಸದ್ಯ ತೆಲುಗಿನಲ್ಲಿ ಈ ಧಾರಾವಾಹಿ ರೆಡಿಯಾಗಿದ್ದು, ಇದೇ ಏಪ್ರಿಲ್ 12ರಿಂದ ಪ್ರಸಾರವಾಗಲಿದೆ.

ʼಜ್ಯೋತಿʼ ಸೂಪರ್ ನ್ಯಾಚುರಲ್ ಕಥಾ ಹಂದರದ ಹೊಂದಿರುವ ಧಾರಾವಾಹಿ ಇದಾಗಿದ್ದು, ಇದರ ಪ್ರಧಾನ ಪಾತ್ರಧಾರಿ ಕನ್ನಡದ ನಟಿ ಮೇಘಾಶ್ರೀ. ಕನ್ನಡದಲ್ಲಿ ಬೆಳ್ಳಿತೆರೆ, ಕಿರುತೆರೆಯಲ್ಲಿ ಹೆಸರು ಮಾಡಿರುವ ಈ ಮಲೆನಾಡ ಹುಡ್ಗಿ, ತೆಲುಗಿನಲ್ಲೂ ಈಗಾಗಲೇ ಮೂರು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ. ಈಗಷ್ಟೇ ತಮಿಳಿನಲ್ಲೂ ಒಂದು ಚಿತ್ರದಲ್ಲಿ ಅಭಿನಯಿಸುವ ಅವಕಾಶ ಮೇಘಾಶ್ರೀ ಸಿಕ್ಕಿದೆಯಂತೆ. ಸದ್ಯ ಅದರ ಚಿತ್ರೀಕರಣದಲ್ಲೂ ಬ್ಯುಸಿ ಇದ್ದಾರಂತೆ. ಈ ನಡುವೆಯೇ ಈಗ ತೆಲುಗು ಹಾಗೂ ತಮಿಳು ಕಿರುತೆರೆಯಲ್ಲೂ ಕಾಣಿಸಿಕೊಳ್ಳಲು ರೆಡಿ ಆಗಿದ್ದಾರೆ.

ಸದ್ಯ ಜ್ಯೋತಿ ಸೀರಿಯಲ್ ತೆಲುಗು ವರ್ಷನ್ ಪ್ರೋಮೋ ರಿಲೀಸ್ ಆಗಿದ್ದು, ನಟಿ ಮೇಘಾಶ್ರೀ ಅವರ ಲುಕ್ ನೋಡಿ ಅಭಿಮಾನಿಗಳೂ ಫಿದಾ ಆಗಿದ್ದಾರೆ. ಕನ್ನಡದಲ್ಲಿ ಕಿರುತೆರೆ, ಬೆಳ್ಳಿತೆರೆಯಲ್ಲಿ ಮೋಡಿ ಮಾಡಿರುವ ಮೇಘಾಶ್ರೀ ಇದೀಗ ಟಾಲಿವುಡ್ ನಲ್ಲಿಯೂ ತಮ್ಮ ಹವಾ ಸೃಷ್ಟಿಸಲಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-15,2021 ಮಿಥುನ ಸಂಕ್ರಾಂತಿ ಸೂರ್ಯೋದಯ: 05:52 AM, ಸೂರ್ಯಸ್ತ: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ, ವಸಂತ ಋತು,...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

error: Content is protected !!