Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಟ ನಾಗಭೂಷಣ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿವ ಸಾಧ್ಯತೆ..!

---Advertisement---

 

ಬೆಂಗಳೂರು: ನಟ ನಾಗಭೂಷಣ್ ಇತ್ತಿಚೆಗೆ ಒಂದು ಆಕ್ಸಿಡೆಂಟ್ ಮಾಡಿದ್ದಾರೆ. ಈ ಅಪಘಾತದಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಎಫ್ಐಅರ್ ಕೂದ ದಾಖಲಾಗಿದ್ದು, ಸ್ಟೇಷನ್ ಬೇಲ್ ಮೇಲೆ ನಾಗಭೂಷಣ್ ಹೊರಗೆ ಬಂದಿದ್ದಾರೆ. ಈ ಮಧ್ಯೆ ಇನ್ನೊಂದು ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ.

ಕೋಣನಕುಂಟೆ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ವಿದ್ಯುತ್ ಕಂಬಕ್ಕೂ ಕಾರು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ. ಇದನ್ನು ಪರಿಶೀಲನೆ ನಡೆಸಿರುವ ಬೆಸ್ಕಾಂ ಅಧಿಕಾರಿಗಳು ನಾಗಭೂಷಣ್ ವಿರುದ್ಧ ದೂರು ನೀಡಲು ನಿರ್ಧರಿಸಿದ್ದಾರೆ.

ಈಗಾಗಲೇ ಈ ಸಂಬಂಧ ಬೆಸ್ಕಾಂ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರು ನೀಡಲು ನಿರ್ಧರಿಸಿದ್ದು, ನಾಗಭೂಷಣ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ. ನಾಗಭೂಷಣ್ ಸ್ಟೇಷನ್ ಬೇಲ್ ಮೇಲೆ ಹೊರಗೆ ಇದ್ದು, ಕರೆದಾಗೆಲ್ಲಾ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಹೀಗಾಗಿ ಇಂದು ಕೂಡ ವಿಚಾರಣೆ ನಡೆಯಲಿದೆ. ನಾಗಭೂಷಣ್ ಅವರಿಗೆ ವಿಚಾರಗೆ ಹಾಜರಾಗುವಂತೆ ನೋಟೀಸ್ ಕೂಡ ನೀಡಲಾಗಿದೆ. ವಿಚಾರಣೆಗೆ ಹಾಜರಾದರೆ ನಾಗಭೂಷಣ್ ಬಳಿ ಹೇಳಿಕೆ ಪಡೆಯಲಿದ್ದಾರೆ. ಇನ್ನು ಕಾರಿನ ಕೆಲವೊಂದು ಟೆಸ್ಟ್ ಮಾಡುವುದಕ್ಕೂ ಪೊಲೀಸರು ತಿಳಿಸಿದ್ದಾರೆ. ಕಾರು ಅಪಘಾತಕ್ಕೆ ಕಾರಣ ಏನಿರಬಹುದು ಎಂಬ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment