ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ | ಚಾಲಕ ಸಾವು…!

1 Min Read

 

ವರದಿ ಕೃಪೆ : ಸುರೇಶ್ ಬೆಳಗೆರೆ,
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 23 : ತಾಲೂಕಿನ ಸಾಣಿಕೆರೆ ಹಾಗೂ ಹೆಗ್ಗೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150 ಎ  ರಲ್ಲಿ ಗ್ರಾನೈಟ್ಸ್ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂಬದಿಯಿಂದ ಈಚರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಅಶೋಕ್  ಸಾವನಪ್ಪಿದ್ದಾನೆ.

ಚಳ್ಳಕೆರೆ ನಗರದಿಂದ ಬೆಂಗಳೂರು ಕಡೆಗೆ ತೆರಳುತ್ತಿದ ಲಾರಿಗೆ ಹಿಂಬದಿಯಿಂದ ಬಂದ ಈಚರ್ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಈಚರ್ ಲಾರಿ ಚಾಲಕ  ಕಾಲು ಮುರಿದು ಗಂಭೀರ ಗಾಯಗೊಂಡಿರುತ್ತಾನೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಫಲಕರಿಯಾಗದೆ ಸಾವನಪ್ಪಿದ್ದಾನೆ.

ಈ ಘಟನೆಯಲ್ಲಿ ಈಚರ್ ಲಾರಿ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ  ಪೋಲೀಸ್ ಇನ್ಸ್ ಪೆಕ್ಟರ್ ಕೆ .ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *