ವರದಿ ಕೃಪೆ : ಸುರೇಶ್ ಬೆಳಗೆರೆ,
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 23 : ತಾಲೂಕಿನ ಸಾಣಿಕೆರೆ ಹಾಗೂ ಹೆಗ್ಗೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ಗ್ರಾನೈಟ್ಸ್ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂಬದಿಯಿಂದ ಈಚರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಅಶೋಕ್ ಸಾವನಪ್ಪಿದ್ದಾನೆ.
ಚಳ್ಳಕೆರೆ ನಗರದಿಂದ ಬೆಂಗಳೂರು ಕಡೆಗೆ ತೆರಳುತ್ತಿದ ಲಾರಿಗೆ ಹಿಂಬದಿಯಿಂದ ಬಂದ ಈಚರ್ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಈಚರ್ ಲಾರಿ ಚಾಲಕ ಕಾಲು ಮುರಿದು ಗಂಭೀರ ಗಾಯಗೊಂಡಿರುತ್ತಾನೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಫಲಕರಿಯಾಗದೆ ಸಾವನಪ್ಪಿದ್ದಾನೆ.
ಈ ಘಟನೆಯಲ್ಲಿ ಈಚರ್ ಲಾರಿ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೋಲೀಸ್ ಇನ್ಸ್ ಪೆಕ್ಟರ್ ಕೆ .ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












