ಸುದ್ದಿಒನ್ : ಇತ್ತೀಚೆಗೆ ಬಿಡುಗಡೆಯಾಗಿ ಸಂಗೀತ ಪ್ರೇಮಿಗಳ ಮನಸೆಳೆದಿದ್ದ ‘ಲವ್ ಸೀಸನ್ಸ್’ ಚಿತ್ರದ ಮೊದಲ ಹಾಡಿನ ಯಶಸ್ಸಿನ ಬೆನ್ನಲ್ಲೇ ಇದೀಗ ಚಿತ್ರತಂಡ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. “ಹೊಸದೊಂದು ಪ್ರೀತಿಯಾನ” ಎಂಬ ಲಿರಿಕಲ್ ವಿಡಿಯೋ ಸಾಂಗ್ ಎನ್.ಆರ್ ಸ್ಟುಡಿಯೋಸ್ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆಯಾಗಿ ಪ್ರೇಕ್ಷಕರ ಮೆಚ್ಚುಗೆ ಪಡೆಯುತ್ತಿದೆ.
“ಹೊಸದೊಂದು ಪ್ರೀತಿ ಯಾನ ಏನೆಂದರು ಚೆನ್ನ… ದಿನವೆಲ್ಲ ಮಾಡುತೀನಿ ನಾ ನಿನ್ನದೆ ಧ್ಯಾನ…” ಎಂಬ ಸಾಲುಗಳಿಂದ ಆರಂಭವಾಗುವ ಈ ಮೆಲೋಡಿ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದಾರೆ. ವೀರ್ ಸಮರ್ಥ್ ಸಂಗೀತ ಸಂಯೋಜನೆ ನೀಡಿದ್ದು, ಕೇಶವ್ ಆನಂದ್ ತಮ್ಮ ಸುಮಧುರ ಕಂಠದಲ್ಲಿ ಹಾಡಿಗೆ ಜೀವ ತುಂಬಿದ್ದಾರೆ.

ಹಾಡಿನಲ್ಲಿ ಮುಕುಂದ ರಾಮಸ್ವಾಮಿ ಹಾಗೂ ಶ್ವೇತಾ ಕೊಗ್ಲೂರು ಮನಮೋಹಕವಾಗಿ ಕಾಣಿಸಿಕೊಂಡಿದ್ದು, ಪ್ರೇಮದ ಮಧುರ ಭಾವನೆಗಳನ್ನು ಲವಲವಿಕೆಯಿಂದ ಕಟ್ಟಿಕೊಟ್ಟಿರುವ ಈ ಗೀತೆ ಮೊದಲ ಹಾಡಿನಂತೆಯೇ ಟ್ರೆಂಡ್ ಸೃಷ್ಟಿಸುವ ನಿರೀಕ್ಷೆ ಮೂಡಿಸಿದೆ.
ಎನ್.ಆರ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಎನ್.ಆರ್ ಮಂಜುನಾಥ್ (ನೀಲೇರಿ) ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕೃತ್ವಿಕ್ ನಿರ್ದೇಶನದ ಈ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ನಿರ್ದೇಶನವಿದೆ.
ಚಿತ್ರಕ್ಕೆ ಕೆ. ಕಲ್ಯಾಣ್, ಪ್ರಮೋದ್ ಮರವಂತೆ ಸೇರಿದಂತೆ ಹಲವು ಸಾಹಿತ್ಯಕರ್ತರು ಗೀತೆಗಳನ್ನು ಬರೆದಿದ್ದಾರೆ. ಅವಿನಾಶ್ ಶಾಸ್ತ್ರಿ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ ಹಾಗೂ ಭಜರಂಗಿ ಮೋಹನ್ ನೃತ್ಯ ಸಂಯೋಜನೆ ಚಿತ್ರಕ್ಕಿದೆ.

ಚಿತ್ರದಲ್ಲಿ ಮುಕುಂದ ರಾಮಸ್ವಾಮಿ ನಾಯಕನಾಗಿ ಅಭಿನಯಿಸಿದ್ದು, ದಿಯಾ ಕೀರ್ತಿ, ಚಂದನಾ ಗೌಡ ಹಾಗೂ ಶ್ವೇತಾ ಕೊಗ್ಲೂರು ನಾಯಕಿಯರಾಗಿ ನಟಿಸಿದ್ದಾರೆ. ಜೊತೆಗೆ ಮಂಡ್ಯ ರಮೇಶ್, ರಾಜೇಶ್ ನಟರಂಗ, ಸಂಗೀತಾ ಅನಿಲ್, ಜಯತೀರ್ಥ, ಚೇತನ್ ದುರ್ಗ, ಕಾಮಿಡಿ ಕಿಲಾಡಿ ಸದಾನಂದ, ಹುಲಿ ಕಾರ್ತಿಕ್ ಹಾಗೂ ಬೇಬಿ ರಿತು ಸಿಂಗ್ ಸೇರಿದಂತೆ ಹಲವರು ತಾರಾಗಣದಲ್ಲಿ ಕಾಣಿಸಿಕೊಂಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















