Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್ ; ಅಕ್ಕಿ, ಅಡುಗೆ ಎಣ್ಣೆ ದರ ಗಗನಕ್ಕೆ!

---Advertisement---

ಸುದ್ದಿಒನ್,ಬೆಂಗಳೂರು,ಮೇ.16: ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಜನಸಾಮಾನ್ಯರ ಬದುಕು ದುಸ್ತರವಾಗುತ್ತಿದೆ. ಇತ್ತೀಚೆಗಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿ ತತ್ತರಿಸಿದ್ದ ಸಾರ್ವಜನಿಕರಿಗೆ, ಇದೀಗ ನಿತ್ಯಬಳಕೆಯ ಅಕ್ಕಿ ಹಾಗೂ ಅಡುಗೆ ಎಣ್ಣೆಯ ಬೆಲೆಯೂ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಿತವ್ಯಯದ ಕರೆ ನೀಡಿದ ಬೆನ್ನಲ್ಲೇ ಈ ಬೆಲೆ ಏರಿಕೆ ಕಂಡುಬಂದಿದ್ದು, ಮಧ್ಯಮ ಮತ್ತು ಕೆಳವರ್ಗದ ಜನರು ಜೀವನ ನಿರ್ವಹಣೆಗೆ ಪರದಾಡುವಂತಾಗಿದೆ.

ಮಾರುಕಟ್ಟೆಯಲ್ಲಿ ತೈಲ ದರಗಳ ಏರಿಕೆ ಸರಣಿ ಮುಂದುವರಿದಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳು ಗಮನಾರ್ಹವಾಗಿ ಹೆಚ್ಚಾಗಿವೆ.
ಪೆಟ್ರೋಲ್ ದರ: ಪ್ರತಿ ಲೀಟರ್ಗೆ 3.27 ರೂ. ಏರಿಕೆ.

ಡೀಸೆಲ್ ದರ: ಪ್ರತಿ ಲೀಟರ್ಗೆ 3.12 ರೂ. ನಷ್ಟು ಹೆಚ್ಚಳವಾಗಿದೆ. ಇದು ಸಹಜವಾಗಿಯೇ ಇತರೆ ಸರಕು ಸಾಗಣೆ ವೆಚ್ಚದ ಮೇಲೂ ಪರಿಣಾಮ ಬೀರಿದೆ.

ಗಗನಕ್ಕೇರಿದ ಅಕ್ಕಿ ಬೆಲೆ: ಗ್ರಾಹಕರಿಗೆ ಬಿಸಿ

ಶ್ರೀಲಂಕಾ ಸೇರಿದಂತೆ ವಿದೇಶಗಳಿಗೆ ಭಾರತದಿಂದ ಅಕ್ಕಿ ರಫ್ತು ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಇದರೊಂದಿಗೆ ಪ್ರಸ್ತುತ ಬೇಸಿಗೆ ಸಮಯದಲ್ಲಿ ಭತ್ತದ ಇಳುವರಿಯೂ ಕುಂಠಿತಗೊಂಡಿದೆ. ಈ ಎರಡೂ ಕಾರಣಗಳಿಂದಾಗಿ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಯ ತೀವ್ರ ಕೊರತೆ ಎದುರಾಗಿದ್ದು, ಬೆಲೆಗಳು ದಿಢೀರ್ ಏರಿಕೆಯಾಗಿವೆ ಎಂದು ವರ್ತಕರು ತಿಳಿಸಿದ್ದಾರೆ.

ಅಡುಗೆ ಎಣ್ಣೆಯೂ ದುಬಾರಿ!

ಅಕ್ಕಿಯ ಬೆನ್ನಲ್ಲೇ ಅಡುಗೆ ಎಣ್ಣೆಯ ದರವೂ ಸಹ ಏರಿಕೆಯ ಹಾದಿ ಹಿಡಿದಿದೆ. ಸೂರ್ಯಕಾಂತಿ ಎಣ್ಣೆ ಪ್ರತಿ ಲೀಟರ್ಗೆ 2 ರೂ. ನಷ್ಟು ಹೆಚ್ಚಾಗಿದೆ. ಇನ್ನು ಚಿಲ್ಲರೆ ಮಾರುಕಟ್ಟೆ ಮಾತ್ರವಲ್ಲದೆ, ಹೋಲ್ಸೇಲ್ ಮಾರುಕಟ್ಟೆಯಲ್ಲೂ ದೊಡ್ಡ ಪ್ರಮಾಣದ ಟಿನ್ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. 15 ಲೀಟರ್ನ ಅಡುಗೆ ಎಣ್ಣೆಯ ಟಿನ್ ಬೆಲೆ ಬರೋಬ್ಬರಿ 50 ರೂ. ಗಳಷ್ಟು ದುಬಾರಿಯಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now