ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಕಾನೂನು ಸಂಕಷ್ಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಕಂಡುಬಂದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಪ್ರದೋಶ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆಗೆ ಕೋರ್ಟ್ ದಿನಾಂಕ ನಿಗದಿಪಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಲು ಪ್ರದೋಶ್‌ಗೆ ಬೆಂಗಳೂರಿನ 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ (CCH) ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಸೆಪ್ಟೆಂಬರ್ 28 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಆದೇಶಿಸಿದೆ.

ಪ್ರದೋಶ್ ನೀಡಲಿರುವ ಹೇಳಿಕೆಯು ತನಿಖೆಯಲ್ಲಿ ಮಹತ್ವದ ತಿರುವು ಪಡೆದುಕೊಳ್ಳಲಿದ್ದು, ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳಿಗೆ ಕಾನೂನಾತ್ಮಕವಾಗಿ ದೊಡ್ಡ ಹಿನ್ನಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.










