ಶ್ರೀಲಂಕಾ ವಿರುದ್ಧ ಆಗಸ್ಟ್ 15ರಿಂದ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನವೇ ಟೀಮ್ ಇಂಡಿಯಾಗೆ ಭಾರಿ ಹಿನ್ನಡೆಯಾಗಿದೆ. ಆಗಸ್ಟ್ 7 ರಂದು ಶ್ರೀಲಂಕಾ XI ವಿರುದ್ಧ ನಡೆಯುತ್ತಿರುವ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡದ ನಿಯಮಿತ ನಾಯಕ ಶುಬ್ಮನ್ ಗಿಲ್ ಗಾಯಗೊಂಡಿದ್ದು, ಮೊದಲ ದಿನದ ಆಟದಿಂದ ಹೊರಗುಳಿದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಉಪನಾಯಕ ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಶುಬ್ಮನ್ ಗಿಲ್ ಗಾಯದ ಕುರಿತು ಬಿಸಿಐಐ (BCCI) ಮಾಹಿತಿ:

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಗಿಲ್ ಅವರ ಆರೋಗ್ಯದ ಕುರಿತು ಅಧಿಕೃತ ಮಾಹಿತಿ ನೀಡಿದ್ದು, “ಆಗಸ್ಟ್ 6 ರ ಗುರುವಾರ ನಡೆಸಿದ ಅಭ್ಯಾಸದ ವೇಳೆಯಲ್ಲಿ ಗಿಲ್ ಅವರ ಬಲಗೈನ ಉಂಗುರದ ಬೆರಳಿಗೆ (Ring Finger) ಪೆಟ್ಟಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅವರು ಶ್ರೀಲಂಕಾ XI ವಿರುದ್ಧದ ಅಭ್ಯಾಸ ಪಂದ್ಯದ ಮೊದಲ ದಿನದ ಆಟಕ್ಕೆ ಲಭ್ಯವಿರುವುದಿಲ್ಲ. ಬಿಸಿಐಐ ವೈದ್ಯಕೀಯ ತಂಡವು ಅವರ ಚೇತರಿಕೆಯನ್ನು ನಿಕಟವಾಗಿ ಗಮನಿಸುತ್ತಿದೆ” ಎಂದು ತಿಳಿಸಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ (WTC) 2025-27ರ ಅಂಗವಾಗಿ ಆಗಸ್ಟ್ 15ರಿಂದ ಗಾಲ್ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಆದರೆ ಸರಣಿ ಆರಂಭಕ್ಕೂ ಮುನ್ನವೇ ಪ್ರಮುಖ ಆಟಗಾರರು ಗಾಯದ ಸಮಸ್ಯೆಗೆ ಈಡಾಗುತ್ತಿರುವುದು ಭಾರತ ತಂಡದ ಚಿಂತೆಗೆ ಕಾರಣವಾಗಿದೆ. ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಗಾಯದ ಕಾರಣದಿಂದ ಸರಣಿಯಿಂದ ಪೂರ್ಣವಾಗಿ ಹೊರಗುಳಿದಿದ್ದಾರೆ. ಜೊತೆಗೆ, ಯುವ ಬ್ಯಾಟರ್ ಸಾಯಿ ಸುದರ್ಶನ್ ಅವರ ಫಿಟ್ನೆಸ್ ಕುರಿತು ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಇದರ ಹೊರತಾಗಿ ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ ಮತ್ತು ವಾಷಿಂಗ್ಟನ್ ಸುಂದರ್ ಕೂಡ ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದಾರೆ.
Update: Captain Shubman Gill sustained an impact injury to his right ring finger during India's practice on Thursday. As a precautionary measure, he will not take the field on Day 1 of the warm-up game against SLC XI. The BCCI Medical Team is monitoring his progress.
KL Rahul… https://t.co/Mzu2yW4OgX
— BCCI (@BCCI) August 7, 2026












