ತಿ.ನರಸೀಪುರ.(ಡಿ.01):ತಿಂಗಳ ಹಿಂದೆಯಷ್ಟೇ ಚಿರತೆ ದಾಳಿಯಿಂದ ಎಂ.ಎಲ್.ಹುಂಡಿ ಗ್ರಾಮದ ಯುವಕನೊಬ್ಬ ಬಲಿಯಾದ ನೆನಪು ಮಾಸುವ ಮುನ್ನವೇ ಚಿರತೆ ಮತ್ತೊಂದು ಬಲಿಯನ್ನು ಪಡೆದಿದೆ.
ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ರಮೇಶ್ ನಾಯಕ ಎಂಬುವರ ಪುತ್ರಿ ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಮೇಘನಾ (22) ಯುವತಿಯು ಚಿರತೆ ದಾಳಿಗೆ ತುತ್ತಾಗಿದ್ದು ,ತಾಲೂಕಿನಲ್ಲಿ ಚಿರತೆ ದಾಳಿ ನಿರಂತರ ಮುಂದುವರೆದಿದೆ.
ಯುವತಿ ಬಹಿರ್ದೆಸೆ ಹೋಗಿದ್ದ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಈಗ ಮತ್ತೊಂದು ಬಡ ಜೀವ ಪ್ರಾಣ ಕಳೆದುಕೊಂಡಂತಾಗಿದೆ.
ಸಾರ್ವಜನಿಕ ಆಸ್ಪತ್ರೆ ಮುಂದೆ ಸಾರ್ವಜನಿಕರಿಂದ ಪ್ರತಿಭಟನೆ ಶುರುವಾಗುತಿದಂತೆ ಶಾಸಕ ಎಂ.ಅಶ್ವಿನ್ ಕುಮಾರ್ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಗೆ ಕುಳಿತರು ಅಲ್ಲದೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು,ಅರಣ್ಯಾಧಿಕಾರಿಗಳು ಭೇಟಿ ನೀಡಬೇಕು ಎಂದು ಪಟ್ಟುಹಿಡಿದಿದ್ದಾರೆ.ಸ್ಥಳದಲ್ಲಿ ಡಿವೈಎಸ್ಪಿ ಗೋವಿಂದರಾಜು ಮೊಕ್ಕಂ ಹೊಡಿದ್ದು, ಪಿಎಸ್ಐ ತಿರುಮಲ್ಲೇಶ್ ಅಹಿತಕರ ಘಟನೆ ನೆಡಯದಂತೆ ಬಂದು ಬಸ್ತು ಏರ್ಪಡಿಸಿದ್ದರು.