#AnswerMadiModi ಎಂದು ಸಿದ್ದರಾಮಯ್ಯ ಮಾಡಿದ ಟ್ವೀಟ್ ಏನು ಗೊತ್ತಾ..?

suddionenews
1 Min Read

 

ಪ್ರಧಾನಿ ಮೋದಿ ಕಾಲೆಳೆದ ವಿಪಕ್ಷ ನಾಯಕ ಸಿದ್ದರಾಮಯ್ಯ, ಟ್ವೀಟ್ ಮಾಡುವ ಮೂಲಕ ಮೋದಿಗೆ ವ್ಯಂಗ್ಯವಾಡಿದ್ದಾರೆ. 4-10-2017 ರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಿದ್ದರು. ನಾನು ಸಿಎಂ ಆಗಿದ್ದ ಕಾಲದ ಮಧುರ ಮತ್ತು ಸಾರ್ಥಕ ನೆನಪು. ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ಸ್ಥಾಪನೆಗೆ 2017ರಲ್ಲಿಯೇ 43.45 ಎಕರೆ ಜಮೀನು ಮತ್ತು ಹೊಸ ಕಟ್ಟಡ ಸಹಿತ ಮೂಲಸೌಕರ್ಯ ನಿರ್ಮಾಣಕ್ಕೆ 350 ಕೋಟಿ ರೂಪಾಯಿ ಮಂಜೂರು ಮಾಡಿದ್ದ ನಮ್ಮ ಸರ್ಕಾರ ಬದ್ಧತೆಯಿಂದ ಈ ಯೋಜನೆಯನ್ನು ಸಾಕಾರಗೊಳಿಸಿತ್ತು. ಪ್ರಧಾನಿ ಮೋದಿ ಅವರು ಇಂದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ನ ನೂತನ ಆವರಣವನ್ನು ಉದ್ಘಾಟಿಸುತ್ತಿದ್ದಾರೆ. ಈ ಸಮಾರಂಭಕ್ಕೆ ಶುಭ ಹಾರೈಸುವೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ,ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಪ್ರಶ್ನೆಗಳನ್ನು ಸುರಿಸಿದ್ದು, #AnswerMadiModi ಎಂಬ ಹ್ಯಾಸ್ ಟ್ಯಾಗ್ ಮೂಲಕ ಪ್ರಶ್ನೆಗಳನ್ನು ಹಾಕಿದ್ದಾರೆ. ಬೆಂಗಳೂರು ಜನತೆ ಬಹುಕಾಲದ ಬೇಡಿಕೆಯಾದ ಬೆಂಗಳೂರು ಉಪನಗರ ರೈಲು ಯೋಜನೆ ನೆನೆಗುದಿಗೆ ಬೀಳಲು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಕಾರಣವಲ್ಲವೇ. ಈ ಯೋಜನೆಯ ಚಾಲನೆ ಇಷ್ಟೊಂದು ವಿಳಂಬವಾಗಲು ಕೇಂದ್ರ ಸರ್ಕಾರವೇ ಹೊಣೆಯಲ್ಲವೇ. ಮೋದಿ ಅವರೇ ಕನ್ನಡದ ಅಸ್ಮಿತೆ ಬಗ್ಗೆ ನಿಮ್ಮ ನಿಲುವೇನು,ನಿಮ್ಮ ಮೌನ ಅಮಿತ್ ಶಾ ಅವರ ಹೇಳಿಕೆಗೆ ಸಹಮತವವೋ..?. ಮೇಕೆದಾಟು ಯೋಜನೆ ಅನುಮತಿ ನೀಡಲು ಕೇಂದ್ರ ಸರ್ಕಾರದ ವಿಳಂಬ ಮಾಡುತ್ತಿರುವುದು ಏಕೆ..?

ಇದಕ್ಕೆ ಕಾರಣ ತಮಿಳುನಾಡು ಸರ್ಕಾರದ ಒತ್ತಡವೇ..?. ಕರ್ನಾಟಕದ‌ ಬಗ್ಗೆ ಕೇಂದ್ರ ಸರ್ಕಾರದ ಪೂರ್ವಗ್ರಹವೇ? ಎಂದು ಪ್ರಶ್ನಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *