Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೋಟೆ ನಾಡಲ್ಲಿ ಮೊಳಗಿದ ಮಾದಕ ವಸ್ತು ವಿರೋಧಿ ಧ್ವನಿ ಬೃಹತ್ ಜಾಗೃತಿ ಜಾಥಾ : ವಿದ್ಯಾರ್ಥಿ ಹಾಗೂ ಪೊಲೀಸ್ ಪಡೆ ಭಾಗಿ

---Advertisement---

ಚಿತ್ರದುರ್ಗ, ಜುಲೈ. 17 : ಯುವ ಪೀಳಿಗೆಯನ್ನು ಬಲಿ ತೆಗೆದುಕೊಳ್ಳುತ್ತಿರುವ ಮಾದಕ ವಸ್ತುಗಳ ದುಷ್ಟ ಜಾಲದ ವಿರುದ್ಧ ಚಿತ್ರದುರ್ಗ ಜಿಲ್ಲಾ ಪೆÇಲೀಸ್ ಇಲಾಖೆ ಸಮರ ಸಾರಿದೆ. ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ‘ಆಪರೇಷನ್ ರೈಸ್’ ಮತ್ತು ‘ಬೇಡ ಬ್ರೋ’ ಎಂಬ ವಿನೂತನ ಘೋಷಣೆಗಳೊಂದಿಗೆ ಬೃಹತ್ ಮಾದಕ ವಸ್ತು ವಿರೋಧಿಸಿ ಶುಕ್ರವಾರ ಜಾಗೃತಿ ಜಾಥಾವನ್ನು ನಡೆಸಲಾಯಿತು. ಜಾಥಾದಲ್ಲಿ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಪಡೆಗಳು ಜೊತೆಯಾಗಿ ಹೆಜ್ಜೆ ಹಾಕಿದವು.

ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಮದಕರಿ ನಾಯಕ ವೃತ್ತದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.

ಜಾಥಾವು ನಗರದ ಬಿ.ಡಿ.ರಸ್ತೆಯಲ್ಲಿನ ಅಂಬೇಡ್ಕರ್, ಮಹಾವೀರ, ಕಿತ್ತೂರು ಚನ್ನಮ್ಮ ವೃತ್ತಗಳ ಮೂಲಕ ಗಾಂಧಿ ವೃತ್ತವನ್ನು ತಲುಪಿತು. ಗಾಂಧಿ ಸರ್ಕಲ್‍ನಲ್ಲಿ ನೆರೆದಿದ್ದ ನೂರಾರು ವಿದ್ಯಾರ್ಥಿಗಳು, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಚಿತ್ರದುರ್ಗ ಜಿಲ್ಲೆ ನಿರ್ಮಾಣ ಮಾಡುವ ಕುರಿತು ಘೋಷಣೆಗಳನ್ನು ಕೂಗಿದರು. ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ರಂಜಿತ್ ಕುಮಾರ್ ಬಂಡಾರು ಅವರ ಬೇಡ ಬೇಡ ಧ್ವನಿಗೆ, ವಿದ್ಯಾರ್ಥಿಗಳು ಡ್ರಗ್ಸ್ ಬೇಡ ಎಂದು ಧ್ವನಿಗೂಡಿಸಿದರು. ಈ ವೇಳೆ ಮಾದಕ ವಸ್ತುಗಳನ್ನು ಕಟ್ಟುನಿಟ್ಟಾಗಿ ವಿರೋಧಿಸುವ ಮತ್ತು ಅವುಗಳಿಂದ ದೂರ ಉಳಿಯುವ ಕುರಿತು, ಸ್ನೇಹಿತರು, ನೆರೆ ಹೊರೆಯವರನ್ನು ತಪ್ಪು ದಾರಿಗೆ ಹೋಗದಂತೆ ಎಚ್ಚರಿಸುವ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಜಾಥಾದಲ್ಲಿ ಪೊಲೀಸ್ ಉಪಾಧೀಕ್ಷಕರುಗಳಾದ ಅರುಣ್ ನಾಗೇಗೌಡ, ಶ್ರೀನಿವಾಸ್, ಸತ್ಯನಾರಾಯಣ್ ಸೇರಿದಂತೆ  ಪೊಲೀಸ್   ವೃತ್ತ ನಿರೀಕ್ಷರು, ಕಾಲೇಜು ಉಪನ್ಯಾಸಕರು, ಸ್ವಯಂ ಸೇವಾ ಸಂಸ್ಥೆಗಳ ಕಾರ್ಯಕರ್ತರು ಹಾಗೂ ಇತರೆ  ಪೊಲೀಸ್   ಸಿಬ್ಬಂದಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now