ಚಿತ್ರದುರ್ಗ. ಮೇ.21: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ ವತಿಯಿಂದ ಭಯೋತ್ಪದನಾ ವಿರೋಧಿ ದಿನ ಆಚರಿಸಲಾಯಿತು.
ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮಥ್ರ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಶ್ರದ್ದಾ ಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ. ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಚಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಭಯೋತ್ಪಾದನಾ ವಿರೋಧಿ ಪ್ರತಿಜ್ಞಾ ವಚನ ಬೋಧಿಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿಜ್ಞಾ ವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.




