Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾವಂತರ ನಿರ್ಲಕ್ಷ್ಯದಿಂದಲೇ ನಗರಗಳಲ್ಲಿ ‘ಎಸ್‌ಐಆರ್’ಗೆ ಹಿನ್ನಡೆ: ಎನ್.ಡಿ. ಕುಮಾರ್ ಬೇಸರ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜು. 18 : ವಿದ್ಯಾವಂತರ ತಾತ್ಸಾರದಿಂದ ನಗರದ ಪ್ರದೇಶಗಳಲ್ಲಿ ಎಸ್‍ಐಆರ್ ಹಿನ್ನಡೆಯಾಗುತ್ತಿದೆ ಎಂದು ಬಿಎಲ್‍ಓ2 ಆದ ಎನ್ ಡಿ ಕುಮಾರ್ ಆರೋಪಿಸಿದ್ದಾರೆ.

ಶನಿವಾರ ಚಿತ್ರದುರ್ಗ ನಗರದ ವಾರ್ಡದ ನಾಲ್ಕನೇ ವಾರ್ಡಿನ 123ನೇ ಭೂತ್‍ನಲ್ಲಿ ಎಸ್‍ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚುನಾವಣಾ ಆಯೋಗ ಪ್ರತಿ ಮತದಾರರಿಗೆ ಎರಡು ಫಾರಂಗಳನ್ನು ನೀಡುತ್ತಿದೆ ಇದರಲ್ಲಿ ಸರಿಯಾದ ಮಾಹಿತಿಯನ್ನು ಭರ್ತಿ ಮಾಡಿ ಅದರಲ್ಲಿ ಒಂದಕ್ಕೆ ಸಹಿಯನ್ನು ಹಾಕುವುದರ ಮೂಲಕ ಬಿಎಲ್‍ಎಗಳಿಗೆ ನೀಡಬೇಕು ಇದರಲ್ಲಿ ಇನ್ನೂಂದು ಫಾರಂಗೆ ಬಿಎಲ್‍ಎಗಳು ಸಹಿಯನ್ನು ಹಾಕಿ ನಿಮಗೆ ನೀಡುತ್ತಾರೆ ಇದನ್ನು ಮತದಾರರ ಕರಡು ಪ್ರತಿಯನ್ನು ಪ್ರಕಟ ಮಾಡುವವರಿಗೂ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕಿದೆ ಇದರ ಬಗ್ಗೆ ಯಾರು ಸಹಾ ಹೆದರುವ ಅಗತ್ಯ ಇಲ್ಲ ಎಂದರು.

ಗ್ರಾಮಾಂತರ ಪ್ರದೇಶದಲ್ಲಿ ಎಸ್.ಐ.ಆರ್.ಉತ್ತಮವಾಗಿ ನಡೆಯುತ್ತಿದೆ ಆದರೆ ನಗರದಲ್ಲಿ ಇದರ ಬಗ್ಗೆ ವಿದ್ಯಾವಂತರು ನಿರ್ಲಕ್ಷ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಚಿತ್ರದುರ್ಗ ನಗರ ಎಸ್.ಐ.ಆರ್. ಪ್ರಕ್ರಿಯೆಯಲ್ಲಿ ಹಿಂದೆ ಇದೆ, ನಗರಸಭೆ ಮತ್ತು ಶಿಕ್ಷಣ ಇಲಾಖೆಯು ಸಿಬ್ಬಂದಿ ಉತ್ತಮವಾಗಿ ಕೆಲಸವನ್ನು ಮಾಡುತ್ತಿದ್ದಾರೆ. ಜಿಲ್ಲಾಡಳಿತ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ನಗರಸಭೆ ವ್ಯವಸ್ಥಾಪಕರಾದ ಜಯಣ್ಣ, ಶಾಸಕರ ಆಪ್ತ ಸಹಾಯಕರಾದ ಶಿವಾನಂದ್ ಕಮ್ಯೂನಿಟಿ ಮೊಬೈಲ್ ದೀಪಾ ಹಾಗೂ ಬಿಎಲ್‍ಓ ರೇಣುಕ. ನಗರಸಭಾ ಮಾಜಿ ಸದಸ್ಯರಾದ ರಾಜೇಶ್. ಕಾಂಗ್ರೆಸ್ ಮುಖಂಡರಾದ ಶಶಿಕಿರಣ್ ಹಾಗೂ ವಾರ್ಡಿನ ಮತದಾರ ಭಾಗವಹಿಸಿದ್ದರು

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now