Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಲಿತರಿಗೆ ಕ್ಷಮೆ ಕೇಳಿ, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ, ಇಲ್ಲವಾದರೆ ಉಗ್ರ ಹೋರಾಟ : ಗೋವಿಂದ ಕಾರಜೋಳ ವಿರುದ್ದ ಸಾಮಾಜಿಕ ಸಂಘರ್ಷ ಸಮಿತಿ ಪ್ರತಿಭಟನೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.02 : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲೆ ಜಾತಿ ನಿಂದನೆಯಾದಾಗ ಕೇಸು ನೀಡದೆ ಹೊಂದಿಕೊಂಡು ಹೋಗಿ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಕಾರಜೋಳ ಹೇಳಿಕೆಯನ್ನು ಖಂಡಿಸಿ ಸಾಮಾಜಿಕ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಎಸ್ಸಿ‌ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಪಾರ್ಲಿಮೆಂಟ್‍ಗೆ ಪ್ರವೇಶಿಸಿರುವ ಗೋವಿಂದ ಕಾರಜೋಳ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಹಿತ ಕಾಯಲು ಬದ್ದರಾಗಿರಬೇಕೆ ವಿನಃ ಮೇಲ್ಜಾತಿಯವರನ್ನು ಓಲೈಕೆ ಮಾಡುವ ಕೆಲಸಕ್ಕೆ ಕೈಹಾಕಬಾರದು. ಕೂಡಲೆ ದಲಿತರಲ್ಲಿ ಕ್ಷಮೆ ಕೇಳಿ ಸಂಸದ ಸ್ಥಾನಕ್ಕೆ ರಾಜಿನಾಮೆ ಕೊಡಬೇಕು. ಇವೆರಡು ಆಗದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಸಾಮಾಜಿಕ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಕೆ.ಕುಮಾರ್ ಎಚ್ಚರಿಸಿದರು.

ಸ್ವಾತಂತ್ರ್ಯ ಪೂರ್ವದಿಂದಲೂ ದಲಿತರ ಮೇಲೆ ನಿರಂತರ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರ, ಕೊಲೆಗಳು ನಡೆಯುತ್ತಿರುವ ಇಂದಿನ ದಿನಮಾನಗಳಲ್ಲಿ ಸಂಸದ ಗೋವಿಂದ ಕಾರಜೋಳರವರು ದಲಿತ ವಿರೋಧಿ, ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿರುವುದು ದಲಿತರ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿದೆ. ಇನ್ನು ಮುಂದೆ ಇಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಘೇರಾವ್ ಹಾಕಲಾಗುವುದೆಂದರು.

ಪ್ರೊ.ಸಿ.ಕೆ.ಮಹೇಶ್, ನಿವೃತ್ತ ತಹಶೀಲ್ದಾರ್ ಮಲ್ಲಿಕಾರ್ಜುನ್ ಹಿರೇಹಳ್ಳಿ, ಲೇಖಕ ಹೆಚ್.ಆನಂದ್‍ಕುಮಾರ್, ಸಿ.ಎ.ಚಿಕ್ಕಣ್ಣ, ಎಂ.ರಾಮಾಂಜನೇಯ,
ಡಿ.ದುರುಗೇಶಪ್ಪ, ಆರ್.ರಾಮಲಿಂಗಪ್ಪ, ಜಯಪ್ಪ, ಆರ್.ಮೈಲೇಶ್, ಪದವಿಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಡಿ.ಡಿ.ಪಿ.ಐ. ಕೆ.ರುದ್ರಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ.  ಜುಲೈ.4:  ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ

error: Content is protected !!