ಚಿತ್ರದುರ್ಗ, (ಫೆ.19) : ನೌಕರರ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ಸಂಘದ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಘಟಕದ ವತಿಯಿಂದ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್ ಅವರ ನೇತೃತ್ವದಲ್ಲಿ
ಪ್ರವಾಸಿ ಮಂದಿರದಲ್ಲಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಯವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಪ್ರಮುಖ ಬೇಡಿಕೆಗಳು:
1) ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಭತ್ಯೆಗಳನ್ನು ಜಾರಿಗೊಳಿಸುವ ಬಗ್ಗೆ.
2) ನೂತನ ಪಿಂಚಣಿ ಯೋಜನೆ ರದ್ದು ಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಬಗ್ಗೆ.
3) ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವ ಬಗ್ಗೆ.
4) ಪ್ರಾಥಮಿಕ ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳ ಬಗ್ಗೆ.
ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ನೌಕರರ ವಿಶೇಷ ಮನವಿ.
5) ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಸರ್ಕಾರಿ ನೌಕರರ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಮಂಜೂರು ಮಾಡುವ ಬಗ್ಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ್ ಕುಮಾರ್ ಜಿ.ಆರ್, ರಾಜ್ಯ ಪರಿಷತ್ ಸದಸ್ಯರಾದ ಕೆ.ಟಿ ತಿಮ್ಮಾರೆಡ್ಡಿ, ಖಜಾಂಚಿಗಳಾದ ಬಿ. ವೀರೇಶ್, ಗೌರವಾಧ್ಯಕ್ಷರಾದ ಜಯಣ್ಣ ಮತ್ತು ಶಾಂತಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರು ಶಿವಮೂರ್ತಿ, ವೀರಣ್ಣ ಎಸ್, ಸುಧಾ ಎನ್, ರಾಘವೇಂದ್ರ ಜೆ., ನಿಂಗಪ್ಪ ಬಿ, ನರಸಿಂಹರೆಡ್ಡಿ, ರಾಜೇಂದ್ರ ಚಕ್ರವರ್ತಿ, ಮೊಹಮದ್ ಖಾಜಾ ಹುಸೇನ್.ಕೆ, ಶ್ರೀನಿವಾಸ ಆರ್, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ಪಿ.ಡಿ.ಓ ಸಂಘದ ಅಧ್ಯಕ್ಷರಾದ ಶ್ರೀ ಪಾತಣ್ಣ ಮತ್ತು ಪದಾಧಿಕಾರಿಗಳು, ವಾಹನ ಚಾಲಕರ ಸಂಘದ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಮತ್ತು ಪದಾಧಿಕಾರಿಗಳು, ಎನ್.ಪಿ.ಎಸ್ ನೌಕರರ ಜಿಲ್ಲಾಧ್ಯಕ್ಷರು ಶ್ರೀ ಲೇಪಾಕ್ಷ ಮತ್ತು ಪದಾಧಿಕಾರಿಗಳು, ಗ್ರಾಮಪಂಚಾಯಿತಿ ಕಾರ್ಯದರ್ಶಿಗಳ ಸಂಘದ ಅಧ್ಯಕ್ಷರು ಶ್ರೀ ಮಾಲತೇಶ್ ಮುದ್ದಜ್ಜಿ ಮತ್ತು ಪದಾಧಿಕಾರಿಗಳು, ಕಂದಾಯ ಇಲಾಖೆಯ ಅಧ್ಯಕ್ಷರಾದ ಶ್ರೀ ಶರಣ್ಣಪ್ಪ ಮತ್ತು ಪದಾಧಿಕಾರಿಗಳು, ಖಜಾನೆ ಇಲಾಖೆಯ ಅಧ್ಯಕ್ಷರಾದ ಶ್ರೀ ಶಿವಕುಮಾರ್ ಪಾಟೀಲ್ ಮತ್ತು ಪದಾಧಿಕಾರಿಗಳು, ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯ ಜಿಲ್ಲಾಧ್ಯಕ್ಷರಾದ ಶ್ರೀ ಕೆ. ನಾಗರಾಜ್ ಮತ್ತು ಪದಾಧಿಕಾರಿಗಳು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸಂಘದ ಅಧ್ಯಕ್ಷರಾದ ಶ್ರೀ ಆಂಜನೇಯ ಮತ್ತು ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಇಲಾಖೆಗಳ ವೃಂದ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರು ಉಪಸ್ಥಿತರಿದ್ದರು.