in ,

ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ…!

suddione whatsapp group join

 

ಚಿತ್ರದುರ್ಗ, (ಜ.17):  ಚಳ್ಳಕೆರೆ ತಾಲ್ಲೂಕಿನ ದೇವರಮರಿಕುಂಟೆ-1 ಹಾಗೂ ದೇವರಮರಿಕುಂಟೆ-2 ಗ್ರಾಮದಲ್ಲಿ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಫೆಬ್ರವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನ.

ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ದೇವರಮರಿಕುಂಟೆ-1 ಕೇಂದ್ರಸ್ಥಾನದಲ್ಲಿ ದೇವರಮರಿಕುಂಟೆ, ಬೊಂಬೆರಹಳ್ಳಿ ಗ್ರಾಮಗಳು ಸೇರಿ  71 ಎಎವೈ, 460 ಪಿ.ಹೆಚ್.ಹೆಚ್, 48 ಎನ್‍ಪಿ.ಹೆಚ್ ಪಡಿತರ ಚೀಟಿ ಸೇರಿದಂತೆ ಒಟ್ಟು 579 ಪಡಿತರ ಚೀಟಿಗಳಿವೆ.

ದೇವರಮರಿಕುಂಟೆ-2 ಕೇಂದ್ರಸ್ಥಾನದಲ್ಲಿ ದೇವರಮರಿಕುಂಟೆ, ವಡೇರಹಳ್ಳಿ ಗ್ರಾಮಗಳು ಸೇರಿ 65 ಎಎವೈ, 454 ಪಿ.ಹೆಚ್.ಹೆಚ್, 48 ಎನ್.ಪಿ.ಹೆಚ್.ಹೆಚ್ ಪಡಿತರ ಚೀಟಿಗಳು ಸೇರಿದಂತೆ ಒಟ್ಟು 567 ಪಡಿತರ ಚೀಟಿಗಳಿಗೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ, ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇವರಿಗೆ ಸಲ್ಲಿಸಲು ತಿಳಿಸಿದೆ.

ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಯಾವುದೇ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗಧಿತ ಫಾರಂ “ಎ” ಅನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಅಥವಾ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ  ಪಡೆಯಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

What do you think?

Written by suddionenews

Leave a Reply

Your email address will not be published.

GIPHY App Key not set. Please check settings

ಕಾಂಗ್ರೆಸ್ – ಬಿಜೆಪಿಯಿಂದ ಒಂದೇ ಯೋಜನೆ : ಯಾರ ಪರ ನಿಲ್ತಾರೆ ಗೃಹಲಕ್ಷ್ಮೀಯರು..?

ಸಂಸದ ತೇಜಸ್ವಿ ಸೂರ್ಯ ಮಾಡಿದ ಎಡವಟ್ಟಿಗೆ 2 ಗಂಟೆ ವಿಮಾನ ಲೇಟ್..!