ಚಿತ್ರದುರ್ಗ,(ಫೆಬ್ರವರಿ.10) : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2021-22ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 7 ಅರ್ಜಿ ಸಲ್ಲಿಸಲು ಕೊನೆಯ ದಿನ.
ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ ಕೊರೆಯಿಸಿ, ಪಂಪ್‍ಸೆಟ್ಟು, ಉಪಕರಣಗಳನ್ನು ಸರಬರಾಜು ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.
ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪಸಮುದಾಯಗಳನ್ನು ಹೊರತುಪಡಿಸಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www. Karnataka.gov.in/dbcdc ನಲ್ಲಿ ಸಂಪರ್ಕಿಸಬೇಕೆಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ವಿ.ವೆಂಕಟರಾಜು ತಿಳಿಸಿದ್ದಾರೆ.