Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಮುರುಘಾ ಮಠದ ಅರ್ಜಿ ವಿಚಾರಣೆ ಇಂದು…!

---Advertisement---

 

ಚಿತ್ರದುರ್ಗ, (ಮಾ.02): ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಪೋಕ್ಸೋ ಕಾಯ್ದೆಯಡಿ ಜೈಲಿನಲ್ಲಿದ್ದಾರೆ. ಆದರೆ ಮಠದ ಆಡಳಿತ ಅಧಿಕಾರಕ್ಕೆ ಸಂಬಂಧಿಸಿದಂತೆ ಮಠದ ಅಧಿಕಾರ ಚಲಾಯಿಸುವ ಅವರ ಹಕ್ಕಿಗೆ ಚಿತ್ರದುರ್ಗದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧ ವಿಧಿಸಲಾಗಿತ್ತು. ಆ ನಿರ್ಬಂಧವನ್ನು ಪ್ರಶ್ನಿಸಿ ಹೈ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಆ ಅರ್ಜಿ ವಿಚಾರಣೆ ಇಂದು ನಡೆಯಲಿದೆ‌.

ಎಸ್ ಜೆ ಎಂ ವಿದ್ಯಾಪೀಠದ ಎಚ್. ಎಂ. ವಿಶ್ವನಾಥ್ ಮತ್ತು ಮಠದ ಪ್ರಸ್ತುತ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿಯವರು ಈ ಅರ್ಜಿಯನ್ನು ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಮೂರ್ತಿ ಕೃಷ್ಣಾ ಎಸ್ ದೀಕ್ಷೀತ್ ಅವರ ಏಕಸದಸ್ಯ ಪೀಠ ಆ ಅರ್ಜಿ ವಿಚಾರಣೆಯನ್ನು ಇಂದು (ಗುರುವಾರ) ಮಧ್ಯಾನ್ಹ 2:30 ರ ವೇಳೆಗೆ ನಡೆಸಲಿದೆ.

ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ 1988 ಕಲಂ 8 (2)ರಡಿ ಶರಣರು ತಮ್ಮ ಅಧಿಕಾರ ಚಲಾಯಿಸಲು ಜಿಲ್ಲಾ‌ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧ ವಿಧಿಸಿರುವುದು ಕಾನೂನು ಬಾಹಿರ ಎಂದು ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...