ಶಿಕ್ಷಣ ಇಲಾಖೆ ಬಹಳ ಮುಖ್ಯವಾದ ಸುತ್ತೋಲೆಯನ್ನು ಹೊರಡಿಸಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣ ಹಕ್ಕು ಕಾಯ್ದೆ ಮೂಲಕ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಸಂಬಂಧ ಪಟ್ಟಂತೆ ಪ್ರಕಟಣೆ ಹೊರಡಿಸಿದೆ. ಈ ಮೂಲಕ ಅರ್ಜಿ ಆಹ್ವಾನಿಸಿದೆ. ಸಾರ್ವಜನಿಕ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿಗೆ ಈಗಾಗಲೇ ಆನ್ಲೈನ್ ಲಿಂಕ್ ಬಿಡುಗಡೆ ಮಾಡಿದೆ.
RTE ಕಾಯ್ದೆಯ ಅನ್ವಯ 1 ರಿಂದ 8ನೇ ತರಗತಿ ಪ್ರವೇಶಕ್ಕೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ಅಡ್ಮಿಷನ್ ಮಾಡಿಸಲು ಬಯಸುವ ಪೋಷಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದು. ಇದರ ಲಾಭ ಪಡೆಯುವುದಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ. ಶಿಕ್ಷಣ ಹಕ್ಕು ಕಾಯ್ದೆ ಅನ್ವಯ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ, ಪ್ರಾರಂಭಿಕ ತರಗತಿಗಳಿಗೆ ಮಕ್ಕಳ ಪ್ರವೇಶಕ್ಕೂ ವಯಸ್ಸು ನಿಗದಿಪಡಿಸಲಾಗಿದೆ.
ಎಲ್ ಕೆಜಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಕನಿಷ್ಠ 4 ವರ್ಷವಾಗಿರಬೇಕು. 1ನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಕನಿಷ್ಠ 5 ವರ್ಷ 5 ತಿಂಗಳಾಗಿರಬೇಕು. ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳ ಪರಿಶೀಲನೆ ಬಳಿಕ ಲಾಟರಿ ಮೂಲಕ ಪ್ರಕ್ರಿಯೆಯಲ್ಲಿ ಅರ್ಹರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ 22-4-2024 ಕಿನೆಯ ದಿನವಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಉಚಿತವಾಗಿ ಅಥವಾ ಸರ್ಕಾರಿ ಪಾವತಿ ಕೇಂದ್ರಗಳಾದ ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜೀ ಜನಸ್ನೇಹಿ ಕೇಂದ್ರಗಳು, ತಾಲೂಕು ಹಾಗೂ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.