Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರು ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳಲು ಅರ್ಜಿ ಆಹ್ವಾನ : ಆರ್. ವಿರೂಪಾಕ್ಷಪ್ಪ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್.25 : ಬೆಳೆಗಾರರಿಗೆ ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳಲು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಆರ್. ವಿರೂಪಾಕ್ಷಪ್ಪ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಹನಿನೀರಾವರಿ ಪದ್ದತಿಯನ್ನು ರೈತರ ಅಳವಡಿಸಿಕೊಳ್ಳಲು ತಾಲ್ಲೂಕಿನ ಎಸ್ ಸಿ.ಎಸ್ ಟಿ ರೈತರಿಗೆ ಶೇ 90 ರಷ್ಟು ಸಹಾಯಧನ, ಸಾಮಾನ್ಯ ವರ್ಗಕ್ಕೆ ಶೇ 70ರಷ್ಟು ಸಹಾಯಧನ ನೀಡಲಾಗುವುದು, ಎಸ್‌ಸಿ ಜನಾಂಗದ ರೈತರಿಗೆ 20 ಲಕ್ಷ , ಸಾಮಾನ್ಯ ವರ್ಗ ರೈತರಿಗೆ ೪೦೦ ಲಕ್ಷ ಗುರಿ ನೀಡಲಾಗಿದೆ. ಎಸ್‌ಟಿ ರೈತರಿಗೆ ಹನಿನೀರಾವರಿರಿ ಪದ್ದತಿ ಅಳವಡಿಕೊಳ್ಳಲು ಅನುದಾನ ಬಿಡುಗಡೆಯಾಗಿಲ್ಲ, ಇವರು ಅರ್ಜಿ ಸಲ್ಲಿಸಲು ಬರುವುದಿಲ್ಲ ಎಂದು ಸ್ವಷ್ಟನೆ ನೀಡಿದ್ದಾರೆ.

ಎಸ್‌ಸಿ, ಸಾಮಾನ್ಯ ವರ್ಗ ರೈತರು ಹನಿನೀರಾವರಿ ಪದ್ದತಿ ಅಳವಡಿಸಿಕೊಳ್ಳಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ರೈತರು ಪಹಣಿ, ಆಧಾರ್ ಕಾರ್ಡ್, ಪಾಸ್ ಬುಕ್, ಜಾತಿ ಪ್ರಮಾಣ ಪತ್ರದೊಂದಿಗೆ ತೋಟಗಾರಿಕೆ ಇಲಾಖೆ ಅರ್ಜಿ ಸಲ್ಲಿಸಿ, ರೈತರು ಅನುಮೋದಿತ ಕಂಪನಿಯಿಂದ ಹನಿನೀರಾವರಿ ಪದ್ದತಿ ಅಳವಡಿಕೊಂಡು ಸಹಾಯಧನ ಪಡೆಬಹುದುಕೊಳ್ಳಬಹುದು ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವಿರೂಪಾಕ್ಷಪ್ಪ ತೋಟಗಾರಿಕೆ ಬೆಳೆ ಬೆಳೆಯು ರೈತರಲ್ಲಿ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...