ಕರ್ನಾಟಕ ಲೋಕಾಯುಕ್ತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗೆ ಆಹ್ವಾನ ನೀಡಲಾಗಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನವೆಂಬರ್ 29 ಕೊನೆಯ ದಿನವಾಗಿದೆ. ಶುಲ್ಕ ಕಟ್ಟಲು ನವೆಂಬರ್ 30 ಕೊನೆಯ ದಿನವಾಗಿದೆ. ಸಂಬಂಧ ಪಟ್ಟ ಇಲಾಖೆಯ ವೆಬ್ಸೈಟ್ ಮೂಲಕ ಅಂದ್ರೆ ಆನ್ಲೈನ್ ಮೂಲಕ ಅರ್ಜಿ ಹಾಕಬೇಕಾಗಿದೆ.
ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ವೇತನ ಶ್ರೇಣಿ ತಿಂಗಳಿಗೆ 34,100 ರಿಂದ ಹಿಡಿದು 67,600 ತನಕ ಇದೆ. ಪದವಿ ಪೂರ್ವ ಶಿಕ್ಷಣದಲ್ಲಿ ಪಾಸ್ ಆಗಿರಬೇಕು. ಹಾಗೇ ಕರ್ನಾಟಕ ಪ್ರೌಢಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲೂ ಪಾಸ್ ಆಗಿರಬೇಕು. ಅರ್ಜಿ ಹಾಕಿದವರ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಮೀಸಲಾತಿ ಆಧಾರದಲ್ಲಿ 1:10 ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ತಯಾರಿಸಲಾಗುತ್ತದೆ. ಈ ಪಟ್ಟಿಯಲ್ಲಿ ಶೇಕಡ 50 ರಷ್ಟು ಅಂಕಗಳನ್ನು ಪಡೆಯಲೇಬೇಕು. ಪಟ್ಟಿಯಲ್ಲಿ ಹೆಸರು ಪಡೆದವರಿಗೆ ಇಲಾಖೆ ಪರೀಕ್ಷೆ ನಡೆಸುತ್ತದೆ. ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದವರಿಗೆ ಕೆಲಸ ಸಿಗಲಿದೆ.
ಸಾಮಾನ್ಯ ಅರ್ಹತೆ, 2A, 2B, 3A, 3B, ಮಾಜಿ ಸೈನಿಕರಿಗೆ ಅರ್ಜಿ ಶುಲ್ಕವನ್ನು 250 ನಿಗಧಿಮಾಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡ ಹಾಗೂ ವಿಶೇಷ ಚೇತನರಿಗೆ ಶುಲ್ಕದಲ್ಲಿ ವಿನಾಯಿತಿಯನ್ನು ಘೋಷಣೆ ಮಾಡಲಾಗುತ್ತದೆ. 18 ರಿಂದ 43 ವರ್ಷದ ಒಳಗಿನವರು ಅರ್ಜಿಯನ್ನು ಸಲ್ಲಿಕೆ ಮಾಡಬೇಕು. ಒಟ್ಟು 16 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. http://lokayukta.kar.nic.in ವೆಬ್ಸೈಟ್ ಗೆ ಭೇಟಿ ನೀಡ ಅರ್ಜಿ ಸಲ್ಲಿಕೆ ಮಾಡಬಹುದು.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…