Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2022 ಕ್ಕೆ ಅರ್ಜಿ ಆಹ್ವಾನ

Facebook
Twitter
Telegram
WhatsApp

ಬೆಂಗಳೂರು  : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ *“ಪ್ರತಿಭಾ ಪುರಸ್ಕಾರ”* ವನ್ನು ಆಯೋಜಿಸುತ್ತಾ ಬಂದಿದ್ದು, 2022ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರದ ಖಾಯಂ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಕೇಂದ್ರ ಸಂಘದಿಂದ Online  ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Online link:  https: //bit.ly/ksgeaprathibapuraskara2022

Online ಮೂಲಕ ಅರ್ಜಿ ಸಲ್ಲಿಸಲು ಅರ್ಜಿದಾರರ ತಂದೆ-ತಾಯಿ/ ಪೋಷಕರು ಕಡ್ಡಾಯವಾಗಿ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕಾಗಿದ್ದು, ವೇತನ ಬಟವಾಡೆ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ/ ತಾಲ್ಲೂಕು/ ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ಸೇವಾ ದೃಢೀಕರಣ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸುವುದು.

ವಿದ್ಯಾರ್ಥಿಯ ಪೋಷಕರು ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಯ ನೌಕರರಾಗಿದ್ದಲ್ಲಿ ಅರ್ಜಿ ಸಲ್ಲಿಸುವಂತಿಲ್ಲ.

ಜಿಲ್ಲಾಧ್ಯಕ್ಷರು ಮತ್ತು ತಾಲ್ಲೂಕು ಅಧ್ಯಕ್ಷರಿಂದ ಸೇವಾ ದೃಢೀಕರಣ ಪತ್ರವಿಲ್ಲದೆ ಸಲ್ಲಿಸಲ್ಪಡುವ ಅರ್ಜಿಗಳನ್ನು  ಪರಿಗಣಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ *ದಿನಾಂಕ: 15/07/2022

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22354783/84, 9902135813 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!