Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕೆ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. ಜ.27: 2024-2025ನೇ ಸಾಲಿನಲ್ಲಿ ಎಸ್‍ಸಿಪಿ, ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ರೂ.5 ಲಕ್ಷ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಜ.31 ಅರ್ಜಿ ಸಲ್ಲಿಸಲು ಕೊನೆಯ ದಿನ.

ತರಬೇತಿ ಹಾಗೂ ಸಹಾಯಧನಕ್ಕಾಗಿ ಚಿತ್ರದುರ್ಗ ಜಿಲ್ಲೆಯ ಪರಿಶಿಷ್ಟ ಜಾತಿಯ-06 ಮತ್ತು ಪರಿಶಿಷ್ಟ ಪಂಗಡದ-05 ಅಭ್ಯರ್ಥಿಗಳು ಸೇರಿ ಒಟ್ಟು 11 ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ  ಸಾಲಿನಲ್ಲಿ ನಿಗದಿಪಡಿಸಲಾಗಿದೆ. ಈ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಿದೆ.

ಈ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಉತ್ತೇರ್ಣರಾಗಿದ್ದು, 20 ರಿಂದ  45 ವಯೋಮಿತಿಯೊಳಗಿರಬೇಕು. ಈ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಚಿತ್ರದುರ್ಗ ಕಛೇರಿಯಿಂದ 10 ನೇ ತರಗತಿ ಉತ್ತೀರ್ಣರಾದ ಪ್ರಮಾಣ ಪತ್ರ ಹಾಗೂ ಖಾಯಂ ಲಘು ವಾಹನ ಚಾಲನಾ ಪರವಾನಗಿ (ಡಿ.ಎಲ್) ನಕಲು ಪ್ರತಿ ಸಲ್ಲಿಸಿ, ಅರ್ಜಿ ಪಡೆಯಬಹುದಾಗಿದೆ. ಈಗಾಗಲೇ ಜ.23 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಇದೇ ಜ.31ರ ಸಂಜೆ 4.30ರ ಒಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಕಾಮನಭಾವಿ ಬಡವಾಣೆ, ಚಿತ್ರದುರ್ಗ ಇವರಿಗೆ ದ್ವಿ-ಪ್ರತಿಯಲ್ಲಿ ಭರ್ತಿ ಮಾಡಿ, ನಿಯಮಗಳಿಗೆ ಅನುಗುಣವಾಗಿ ದಾಖಲೆಗಳನ್ನು ಕ್ರೂಢೀಕರಿಸಿ ಕ್ರಮವಾಗಿ ಲಗತ್ತಿಸಿ  ಖುದ್ದಾಗಿ ಸಲ್ಲಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-234466 ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment