ದಾವಣಗೆರೆ ಜ.22 : ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಸೇನೆಯ ನೇಮಕಾತಿಗಾಗಿ ಅವಿವಾಹಿತ ಯುವಕ, ಯುವತಿಯರಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ದ್ವಿತೀಯ ಪಿ.ಯು.ಸಿ. (ವಿಜ್ಞಾನ, ವಾಣಿಜ್ಯ ಮತ್ತು ಕಲೆ ವಿಷಯಗಳಲ್ಲಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ.50, ಮತ್ತು ಇಂಗ್ಲೀಷ್‍ನಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಬೇಕು. 2 ಜನವರಿ 2004 ರಿಂದ 02 ಜುಲೈ 2007 ರ ನಡುವೆ (ಎರಡು ದಿನಾಂಕಗಳನ್ನು ಒಳಗೊಂಡಂತೆ) ಜನಿಸಿದವರಾಗಿರÀಬೇಕು. ಅರ್ಜಿ ಸಲ್ಲಿಸಲು ಫೆ.6 ಕೊನೆಯ ದಿನವಾಗಿರುತ್ತದೆ.
ಆಸಕ್ತರು https://agnipathvayu.cdac.in ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ದೂ.ಸಂ: 08192-259446 ಸಂಪರ್ಕಿಸಲು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ರವೀಂದ್ರ.ಡಿ ತಿಳಿಸಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






