ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 14 ಕಡೆಯ ದಿನಾಂಕವಾಗಿದ್ದು, ಆಫ್ಲೈನ್ ಮೂಲಕ ಸಲ್ಲಿಸಬಹುದು.
ದಾವಣಗೆರೆ ವಿವಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಇರಲಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 3 ವರ್ಷಗಳು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ರಿಜಿಸ್ಟ್ರಾರ್, ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ, ದಾವಣಗೆರೆ- 577007, ಕರ್ನಾಟಕ ಈ ವಿಳಾಸಕ್ಕೆ ನಿಮ್ಮ ಅರ್ಜಿಯನ್ನು ಕಳುಹಿಸಬೇಕು. 10 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವೇತನ 30350-97100 ರೂ. ಪ್ರತಿ ತಿಂಗಳು ಇರಲಿದೆ.