KPSC ಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಗ್ರೂಪ್ ಸಿ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, 20 ಲೇಬರ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 29ರಂದು ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ 20 ಲೇಬರ್ ಇನ್ಸ್ಪೆಕ್ಟರ್ ಹುದ್ದೆ ಖಾಲಿ ಇದೆ. ಕರ್ನಾಟಕದಲ್ಲಿಯೇ ಹುದ್ದೆಗಳಿದ್ದು, ವೇತನ ತಿಂಗಳಿಗೆ 33450-62600 ರೂಪಾಯಿ ಇದೆ.

ಈ ಹುದ್ದೆಗೆ ಅರ್ಜಿ ಹಾಕಲು ಬಯಸುವ ಅರ್ಜಿದಾರರು ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 5 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 3 ವರ್ಷಗಳು, ವಿಕಲಚೇತನ, ವಿಧವೆ ಅಭ್ಯರ್ಥಿಗಳು: 10 ವರ್ಷಗಳು ವಯೋಮಿತಿಯಲ್ಲಿದೆ.

ಪ.ಜಾ, ಪ.ಪಂ, ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳು: 35 ರೂ. ಮಾಜಿ ಸೈನಿಕ ಅಭ್ಯರ್ಥಿಗಳು: .85 v ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 335 ರೂ. ಸಾಮಾನ್ಯ ಅಭ್ಯರ್ಥಿಗಳು: 635 ರೂಪಾಯಿ ಇರಲಿದೆ.

ಸೆಪ್ಟೆಂಬರ್ 30 ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್ 29 ಅರ್ಜಿ ಸಲ್ಲಿಸಲು ಕಡೆಯ ದಿನಾಂಕವಾಗಿದೆ. kpsc.kar.nic.in ಈ ವೆಬ್ ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago