Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖಾಸಗಿ ಶಾಲೆಗಳ ನೋಂದಣಿ ಮತ್ತು ಉನ್ನತೀಕರಣಕ್ಕೆ ಅರ್ಜಿ ಸಲ್ಲಿಕೆ ಅವಧಿ ಜೂನ್ 30ರವರೆಗೆ ವಿಸ್ತರಣೆ

---Advertisement---

ಬೆಂಗಳೂರು: ರಾಜ್ಯದಲ್ಲಿ 2026-27ನೇ ಸಾಲಿಗೆ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳನ್ನು ಪ್ರಾರಂಭಿಸಲು ಮತ್ತು ಶಾಲಾ ಡೈಸ್ (DISE) ಕೋಡ್ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಜೂನ್ 30ರವರೆಗೆ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ಹಿಂದೆ ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿತ್ತು. ಆದರೆ ಶಾಲಾ ಆಡಳಿತ ಮಂಡಳಿಗಳ ಮನವಿಯ ಮೇರೆಗೆ ಸಾರ್ವಜನಿಕ ಹಿತದೃಷ್ಟಿಯಿಂದ ಜೂನ್ 03 ರಿಂದ ಜೂನ್ 30ರವರೆಗೆ ಒಟ್ಟು 28 ದಿನಗಳ ಕಾಲ ಅಂತಿಮವಾಗಿ ಇಲಾಖೆ ಅವಕಾಶ ಕಲ್ಪಿಸಿದೆ. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಹಾಗೂ ಈ ಹಿಂದೆ ಅರ್ಜಿ ಸಲ್ಲಿಸಿ ತಿರಸ್ಕೃತಗೊಂಡಿರುವ ಆಡಳಿತ ಮಂಡಳಿಗಳಿಗೆ ಈ ವಿಸ್ತರಣೆ ಅನ್ವಯವಾಗಲಿದೆ.

ಮುಖ್ಯ ದಿನಾಂಕಗಳ ವಿವರ:

ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿ: 08-06-2026 ರಿಂದ 30-06-2026

ನೋಂದಣಿ ಶುಲ್ಕ ಪಾವತಿ (ಚಲನ್ ಜನರೇಟ್ ಮಾಡಲು) ಕೊನೆಯ ದಿನ: ನಗದು (Cash Mode) ಮೂಲಕ: 23-06-2026

ಆನ್‌ಲೈನ್/UPI ಮೂಲಕ: 27-06-2026 ತಿರಸ್ಕೃತಗೊಂಡ ಅರ್ಜಿಗಳ ಪುನರ್ ಸಲ್ಲಿಕೆ: 03-06-2026 ರಿಂದಲೇ ತಂತ್ರಾಂಶದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (RTE)-2009ರ ನಿಯಮದಂತೆ 1 ರಿಂದ 5ನೇ ತರಗತಿಗಳಿಗೆ ಕನಿಷ್ಠ 200 ಕಾರ್ಯನಿರ್ವಹಣಾ ದಿನಗಳು (800 ಗಂಟೆಗಳು) ಮತ್ತು 6 ರಿಂದ 8ನೇ ತರಗತಿಗಳಿಗೆ ಕನಿಷ್ಠ 220 ಕಾರ್ಯನಿರ್ವಹಣಾ ದಿನಗಳು (1000 ಗಂಟೆಗಳು) ಬೋಧನಾ ಅವಧಿ ಇರಬೇಕು. ಈ ಕಾರಣಕ್ಕಾಗಿ ಯಾವುದೇ ಪರಿಸ್ಥಿತಿಯಲ್ಲೂ ಇನ್ನು ಮುಂದೆ ಕಾಲಾವಕಾಶ ವಿಸ್ತರಿಸಲಾಗುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಅನುಮತಿ ಇಲ್ಲದೆ ಪ್ರವೇಶಾತಿ ನಿಷೇಧ: ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ನೋಂದಣಿ ಅಥವಾ ಅನುಮತಿ ಪಡೆಯದೇ ಯಾವುದೇ ಶಾಲೆಗಳು ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿ ಪ್ರವೇಶಾತಿ ಮಾಡಿಕೊಂಡರೆ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಅಧಿಕಾರಿಗಳಿಗೆ ಗಡುವು: ಆನ್‌ಲೈನ್‌ನಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಆಯಾ ದಿನವೇ ಪರಿಶೀಲಿಸಿ ಅನುಮೋದಿಸಬೇಕು ಅಥವಾ ತಿರಸ್ಕರಿಸಬೇಕು. ಪರಿಶೀಲನೆಯಲ್ಲಿ ವಿಳಂಬ ಉಂಟಾದರೆ ಸಂಬಂಧಪಟ್ಟ ಉಪನಿರ್ದೇಶಕರನ್ನು (DDPI) ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಇಚ್ಛಿಸುವ ಆಡಳಿತ ಮಂಡಳಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ https://schooleducation.karnataka.gov.in/ ಮೂಲಕ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now