Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸರ್ಕಾರದಿಂದ 505 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ!

---Advertisement---

ಬೆಂಗಳೂರು.ಜುಲೈ.11: ರಾಜ್ಯದ ನಿರುದ್ಯೋಗಿ ಯುವಜನತೆಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 505 ‘ಗ್ರೂಪ್-ಸಿ’ ವೃಂದದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಕೆ.ಇ.ಎ. ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಮುಖ ದಿನಾಂಕಗಳು:

ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 11.07.2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.07.2026

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 31.07.2026

ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ: 04.10.2026 (ಪತ್ರಿಕೆ-1 ಮತ್ತು ಪತ್ರಿಕೆ-2)

ಜಿಲ್ಲಾವಾರು ಹುದ್ದೆಗಳ ವಿವರ:
ರಾಜ್ಯದ ಒಟ್ಟು 21 ಜಿಲ್ಲೆಗಳಲ್ಲಿ ಈ ಕೆಳಗಿನಂತೆ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ:

ತುಮಕೂರು – 50, ಮಂಡ್ಯ – 50, ಬೆಳಗಾವಿ – 48, ಮೈಸೂರು – 45, ಹಾಸನ – 35, ಚಾಮರಾಜನಗರ – 31, ಬೆಂಗಳೂರು ದಕ್ಷಿಣ – 30, ಬೆಂಗಳೂರು ಗ್ರಾಮಾಂತರ – 29, ಕೋಲಾರ – 22, ಚಿಕ್ಕಬಳ್ಳಾಪುರ – 21, ಬೆಂಗಳೂರು ನಗರ – 20, ದಕ್ಷಿಣ ಕನ್ನಡ – 20, ಶಿವಮೊಗ್ಗ – 18, ಬಾಗಲಕೋಟೆ – 16, ಚಿತ್ರದುರ್ಗ – 15, ಹಾವೇರಿ – 15, ಗದಗ್ – 14, ಉಡುಪಿ – 10, ಚಿಕ್ಕಮಗಳೂರು – 10, ಬೀದರ್ – 04, ರಾಯಚೂರು – 02.
(ಗಮನಿಸಿ: ಅಭ್ಯರ್ಥಿಗಳು ಕೇವಲ ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ).

ಶೈಕ್ಷಣಿಕ ವಿದ್ಯಾರ್ಹತೆ:
ಅಭ್ಯರ್ಥಿಗಳು ಪಿ.ಯು.ಸಿ. (12ನೇ ತರಗತಿ) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು (CBSE/ICSE/NIOS/3 ವರ್ಷದ ಡಿಪ್ಲೊಮಾ/ಐಟಿಐ ತತ್ಸಮಾನ ಕೋರ್ಸ್ಗಳನ್ನು ಪರಿಗಣಿಸಲಾಗುತ್ತದೆ).

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ/ಪ್ರಮಾಣಪತ್ರವನ್ನು ಹೊಂದಿರಬೇಕು. ಫಲಿತಾಂಶಕ್ಕಾಗಿ ಕಾಯುತ್ತಿರುವವರಿಗೆ ಅವಕಾಶವಿರುವುದಿಲ್ಲ.

ವಯೋಮಿತಿ ವಿವರ:
ಕನಿಷ್ಠ ವಯೋಮಿತಿ 18 ವರ್ಷಗಳಾಗಿರಬೇಕು. ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ (5 ವರ್ಷಗಳ ಸಡಿಲಿಕೆಯನ್ನು ಅಳವಡಿಸಿಕೊಂಡ ನಂತರ):

ಸಾಮಾನ್ಯ ಅರ್ಹತೆ (GM): 40 ವರ್ಷಗಳು

ಪ್ರವರ್ಗ 2ಎ, 2ಬಿ, 3ಎ, 3ಬಿ: 43 ವರ್ಷಗಳು

SC / ST / ಪ್ರವರ್ಗ-1: 45 ವರ್ಷಗಳು
(ಮಾಜಿ ಸೈನಿಕರು, ವಿಶೇಷ ಚೇತನರು ಹಾಗೂ ವಿಧವೆಯರಿಗೆ ನಿಯಮಾನುಸಾರ ಹೆಚ್ಚುವರಿ ವಯೋಮಿತಿ ಸಡಿಲಿಕೆ ಇರಲಿದೆ).

ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ವರ್ಷಗಳ ಪ್ರೊಬೇಷನರಿ ಅವಧಿ ಇರಲಿದ್ದು, ರೂ. 34,100 ರಿಂದ ರೂ. 67,600 ರವರೆಗಿನ ಆಕರ್ಷಕ ವೇತನ ಶ್ರೇಣಿ ಅನ್ವಯವಾಗುತ್ತದೆ ಹಾಗೂ ಎನ್.ಪಿ.ಎಸ್. (NPS) ಪೆನ್ಷನ್ ಸೌಲಭ್ಯವಿರುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಮತ್ತು ಇತರೆ ಹಿಂದುಳಿದ ವರ್ಗಗಳು (2A, 2B, 3A, 3B): ರೂ. 750/-

SC, ST, ಪ್ರವರ್ಗ-1, ಮಾಜಿ ಸೈನಿಕರು, ತೃತೀಯ ಲಿಂಗಿಗಳು: ರೂ. 500/-

ವಿಶೇಷ ಚೇತನ ಅಭ್ಯರ್ಥಿಗಳಿಗೆ: ರೂ. 250/-

ಪರೀಕ್ಷಾ ವಿಧಾನ ಹಾಗೂ ಪಠ್ಯಕ್ರಮ:
ಸ್ಪರ್ಧಾತ್ಮಕ ಪರೀಕ್ಷೆಯು ಆಫ್ಲೈನ್ ಓ.ಎಂ.ಆರ್. (Offline-OMR) ಮಾದರಿಯಲ್ಲಿ ನಡೆಯಲಿದ್ದು, ಪ್ರತಿ ತಪ್ಪು ಉತ್ತರಕ್ಕೆ 0.25 ನೆಗೆಟಿವ್ ಅಂಕಗಳ ಮೌಲ್ಯಮಾಪನ ಇರಲಿದೆ.

ಕನ್ನಡ ಭಾಷಾ ಪರೀಕ್ಷೆ: ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕಗಳನ್ನು ಗಳಿಸುವುದು ಕಡ್ಡಾಯ (ಅರ್ಹತಾ ಪರೀಕ್ಷೆ ಮಾತ್ರ).

ಪತ್ರಿಕೆ-1 (100 ಅಂಕಗಳು – 2 ಗಂಟೆ): ಸಾಮಾನ್ಯ ಜ್ಞಾನ, ದೈನಂದಿನ ಗ್ರಹಿಕೆ, ಸಂವಿಧಾನ, ಇತಿಹಾಸ, ಭೂಗೋಳ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಕುರಿತ ವಿಷಯಗಳು.

ಪತ್ರಿಕೆ-2 (100 ಅಂಕಗಳು – 2 ಗಂಟೆ): ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಮತ್ತು ಕಂಪ್ಯೂಟರ್ ಜ್ಞಾನ.

ಅರ್ಹ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಬಹುದು.

Join WhatsApp

Join Now

Join Telegram

Join Now