ಗೃಹರಕ್ಷಕ ದಳದ ಗೌರವ ಸಮಾದೇಷ್ಟರ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ

1 Min Read

ದಾವಣಗೆರೆ (ಆ.29) :  ಜಿಲ್ಲೆಯಲ್ಲಿ ಗೃಹರಕ್ಷಕ ದಳದ  ಗೌರವ ಸಮಾದೇಷ್ಟರ ಹುದ್ದೆಯು 25 ಮೇ 2021 ರಿಂದ ಖಾಲಿಯಾಗಿದ್ದು, ಸರ್ಕಾರದ ನಿರ್ದೇಶನದಂತೆ ತುರ್ತಾಗಿ ಸೂಕ್ತವಾದ ವ್ಯಕ್ತಿಯನ್ನು ಆಯ್ಕೆ ಮಾಡಿ ಅರ್ಹತೆ ಆಧಾರದ ಮೇಲೆ ತುಂಬ ಬೇಕಾಗಿರುತ್ತದೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಜನ್ಮ ದಿನಾಂಕ, ಶೈಕ್ಷಣಿಕ ಅರ್ಹತೆ, ವಿಳಾಸ, ಪೋನ್ ನಂಬರ್ ಒಳಗೊಂಡ ಇನ್ನಿತರೆ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಸೆಪ್ಟೆಂಬರ್ 30, 2022 ರೊಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದಿ ಭಾಷೆ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ (ಆ.29) :  ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಸಿದ್ಧಾರ್ಥ ನಗರದ ಅನುದಾನಿತ ಪ್ರೌಢಶಾಲೆಯಲ್ಲಿ ಖಾಲಿ ಇರುವ ಹಿಂದಿ ಭಾಷೆ ಶಿಕ್ಷಕ ಹುದ್ದೆಗೆ ಬಿ.ಎ, ಬಿ.ಇಡಿ (ಹಿಂದಿ ಭಾಷೆ ಐಚ್ಚಿಕ ವಿಷಯ) ವಿದ್ಯಾರ್ಹತೆಯುಳ್ಳ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ.

ಆಸಕ್ತರು ದಿನಾಂಕ ಆಗಷ್ಟ್ 30 ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182 220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article
Leave a Comment

Leave a Reply

Your email address will not be published. Required fields are marked *