ಚಿತ್ರದುರ್ಗ. ಮಾರ್ಚ್ 16: ಹೊಳಲ್ಕೆರೆ ಹಾಗೂ ಹಿರಿಯೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯಗಳಲ್ಲಿ ಖಾಲಿ ಇರುವ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 06 ಅರ್ಜಿ ಸಲ್ಲಿಸಲು ಕೊನೆಯ ದಿನ.
ಹೊಳಲ್ಕೆರೆ ಹಾಗೂ ಹಿರಿಯೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯಗಳಲ್ಲಿ ಅಪರ ಸರ್ಕಾರಿ ವಕೀಲರ ನೇಮಕಾತಿ ಅವಧಿಯು ಮುಕ್ತಾಯವಾಗುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 26(2)ರನ್ವಯ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ನೇಮಕಾತಿ ಮಾಡಲು ಉದ್ದೇಶಿಸಲಾಗಿದೆ.
ಆಸಕ್ತಿವುಳ್ಳ ಹಾಗೂ 07 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರು ಏಪ್ರಿಲ್ 06ರ ಸಂಜೆ 5.30ರೊಳಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಚಿತ್ರದುರ್ಗ ಇಲ್ಲಿಗೆ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.






