ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಮೇ.09: 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಅಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರು, ಉಪನ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ.19 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕ ಮಾಡಲು ಎಂ.ಎ ಬಿ.ಇಡಿ, ಎಂ.ಎಸ್ಸಿ ಬಿ.ಇಡಿ, ಎಂ.ಕಾಂ ಬಿ.ಇಡಿ ಹಾಗೂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕ ಮಾಡಲು ಬಿ.ಎ ಬಿ.ಇಡಿ, ಬಿ.ಎಸ್ಸಿ ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿಗಳು ವೆಬ್‍ಸೈಟ್ https://dom.karnataka.gov.in/ ನಲ್ಲಿ ದೊರೆಯುತ್ತವೆ.
ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸ್ಟೇಡಿಯಂ ರಸ್ತೆ, ಅಂಜನೇಯ ದೇವಸ್ಥಾನ ಎದುರು. ಶ್ರೀರಾಮ ಕಾಂಪ್ಲೆಕ್ಸ್, ಮೊದಲನೇ ಮಹಡಿ, ಚಿತ್ರದುರ್ಗ ಇಲ್ಲಿಗೆ ದಿನಾಂಕ 19-05-2025ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ, ಸಂಬಂಧಪಟ್ಟ ಶಾಲೆ, ಕಾಲೇಜು ಹಾಗೂ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್