Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅರೇ ಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ.‌ಸೆ.26: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಚಿತ್ರದುರ್ಗ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (Para Legal Volunteers)  ಕಾರ್ಯನಿರ್ವಹಿಸಲು ಆಸಕ್ತಿಯನ್ನು ಹೊಂದಿರುವ ವಿವಿಧ  ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಕ್ಟೋಬರ್ 08 ಅರ್ಜಿ ಸಲ್ಲಿಸಲು ಕೊನೆಯ ದಿನ.

ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು, ಪಂಚಾಯಿತಿ ಸದಸ್ಯರು, ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸಿರುವ ನಿವೃತ್ತ ಸರ್ಕಾರಿ ನೌಕರರು, ಸಾಮಾಜಿಕ ಸೇವಾ ಮನೋಭಾವ ಇರುವ ಕಾರ್ಯಕರ್ತರು, ಮಹಿಳೆಯರು, ಮಂಗಳಮುಖಿಯರು, ಅಲ್ಪಸಂಖ್ಯಾತರು, ಎಂಎಸ್‍ಡಬ್ಲ್ಯೂ ವಿದ್ಯಾರ್ಥಿ ಹಾಗೂ ಪ್ರಾಧ್ಯಾಪಕರು, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ಕಾನೂನು ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ನಿವೃತ್ತ ಸೈನಿಕರು, ಸೈನಿಕರ ಕುಟುಂಬದ ಸದಸ್ಯರು, ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ  ಮತ್ತು ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂದಿಗಳು ಮತ್ತು ಸ್ವ  ಸಹಾಯ ಸಂಘಗಳ ಸದಸ್ಯರನ್ನು ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ ಅಂತ ಕಾರ್ಯನಿರ್ವಹಿಸಲು ನೇಮಕ ಮಾಡಿಕೊಳ್ಳಬೇಕಾಗಿರುವುದರಿಂದ ಸೇವಾ ಮನೋಭಾವನೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿಗಧಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಅದನ್ನು ಭರ್ತಿ ಮಾಡಿ ಅಕ್ಟೋಬರ್ 08ರ ಸಂಜೆ 5 ರ ಅವಧಿಯ ಒಳಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖುದ್ದಾಗಿ ಸಲ್ಲಿಸಲು ತಿಳಿಸಿದೆ.

ಕಳೆದ ವರ್ಷದಲ್ಲಿ ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (PLV)  ನೇಮಕಗೊಂಡು ಮುಂದಿನ ವರ್ಷಕ್ಕೆ ಕರ್ತವ್ಯ ನಿರ್ವಹಿಸಲು ಆಸಕ್ತರಿರುವವರು ಒಪ್ಪಿಗೆ ಪತ್ರವನ್ನು ಮೇಲೆ ಹೇಳಿದ ದಿನಾಂಕದೊಳಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಲು ಸೂಚಿಸಲಾಗಿದೆ. ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕೆಲಸ ನಿರ್ವಹಿಸಲು ಯಾವುದೇ ರೀತಿಯಾದ ವೇತನ ಇರುವುದಿಲ್ಲ. ರಾಜ್ಯ ಕಾನೂನು ಸೇವಾ ಪ್ರಾಧಿಕಾರರವರ ನಿರ್ದೇಶನದಂತೆ ಯಾವುದಾದರೂ ಕಾನೂನು ಸೇವಾ ಕೇಂದ್ರಗಳಿಗೆ ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (PLV)  ನೇಮಿಸಿದ್ದಲ್ಲಿ ಪ್ರತಿ ಕೆಲಸದ ದಿನಕ್ಕೆ ರೂ. 250/- ಮೀರದಂತೆ ಗೌರವಧನ ನಿಗಧಿಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now