Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ, (ಮಾರ್ಚ್.10) : ಚಿತ್ರದುರ್ಗ ತೋಟಗಾರಿಕೆ ಇಲಾಖೆಯ ಅಧೀನದ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಏಪ್ರಿಲ್ 12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಹೋಬಳಿ ವ್ಯಾಪ್ತಿಯ ಐಯ್ಯನಹಳ್ಳಿ ಗ್ರಾಮದಲ್ಲಿನ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2023-24ನೇ ಸಾಲಿನಲ್ಲಿ 2023ರ ಮೇ 02 ರಿಂದ 2024ರ ಫೆ.29 ರವರೆಗಿನ ಅವಧಿಯ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಅರ್ಜಿಗಳನ್ನು ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯಲ್ಲಿ ಅಥವಾ ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in
ನಲ್ಲಿ ಮಾಚ 11 ರಿಂದ ಏಪ್ರಿಲ್ 12 ರವರೆಗೆ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.

ಆಯ್ಕೆಯಾದ ಶಿಬಿರಾರ್ಥಿಗಳಿಗೆ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ವಸತಿ ಸಹಿತ ತರಬೇತಿ ನೀಡಲಾಗುವುದು. ಮಾಜಿ ಸೈನಿಕ ಅಭ್ಯರ್ಥಿಗಳು ಆಯ್ಕೆಗೊಂಡಲ್ಲಿ ಈ ಅಭ್ಯರ್ಥಿಗಳಿಗೆ ಉಚಿತವಾಗಿ ಕಲಿಕೆಯ ಎಲ್ಲಾ ತರಹದ ಅವಕಾಶಗಳನ್ನು ಕಲ್ಪಿಸಲಾಗುವುದು.

ಆದರೆ ವಸತಿ ನಿಲಯದಲ್ಲಿ ವಾಸ್ತವ್ಯದ ವ್ಯವಸ್ಥೆ ಕಡ್ಡಾಯ ಇರುವುದಿಲ್ಲ ಹಾಗೂ ಶಿಷ್ಯವೇತನಕ್ಕೆ ಅವಕಾಶವಿರುವುದಿಲ್ಲ.

ತರಬೇತಿಗೆ ಒಟ್ಟು 15 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಅದರಲ್ಲಿ 4 ಮಹಿಳೆಯರು, 11 ಪುರುಷರು, ಪರಿಶಿಷ್ಟ ಜಾತಿ 02, ಪರಿಶಿಷ್ಟ ಪಂಗಡಕ್ಕೆ 1 ಮೀಸಲಾತಿ ಇದೆ.

ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣವಾಗಿರಬೇಕು. ತರಬೇತಿ ಬಯಸುವ ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಜಮೀನನ್ನು ಸಾಗುವಳಿ ಮಾಡುತ್ತಿರಬೇಕು. ಮಾಜಿ ಸೈನಿಕರ ತರಬೇತಿಯನ್ನು  ಪಡೆಯಲು ಇಚ್ಚಿಸಿದ್ದಲ್ಲಿ ಡಿಸ್‍ಜಾರ್ಜ್ ಬುಕ್, ಪರ್ಸನಲ್ ಪೆನ್ಶೆನ್ ಆರ್ಡರ್ ಕಾಪಿ, ಎಕ್ಸ್ ಸರ್ವಿಸ್ ಮ್ಯಾನ್ ಐಡಿ ಕಾರ್ಡ್ ಕಾಪಿ, ಇತ್ಯಾದಿಗಳನ್ನ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ವರ್ಷ ದಿಂದ 33 ವರ್ಷ, ಮಾಜಿ ಸೈನಿಕರಿಗೆ 33 ವರ್ಷ ದಿಂದ 65 ವರ್ಷ ವಯಸ್ಸಿನವರಾಗಿರಬೇಕು. ಮೆರಿಟ್ ಆಧಾರದ ಮೇಲೆ ಸರ್ಕಾರದ ಮೀಸಲಾತಿ ನಿಯಮಾನುಸಾರ ಆಯ್ಕೆ ವಿಧಾನ ನಡೆಯಲಿದೆ.

ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.30, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ  ರೂ.15 ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ ಅಥವಾ ಡಿಮ್ಯಾಂಡ್ ಡ್ರಾಫ್ಟ್ (DD)  ಮೂಲಕ Deputy Director of  Horticulture (ZP) Chitradurga ಹೆಸರಿನಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಚಿತ್ರದುರ್ಗ ಕಚೇರಿಗೆ ಏಪ್ರಿಲ್ 12ರ ಸಂಜೆ 5.30 ಗಂಟೆಯೊಳಗೆ  ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-230895, 9980991048 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...