Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

---Advertisement---

 

ಚಿತ್ರದುರ್ಗ. ಅ.12: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 

ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್‍ಲೈನ್‍ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ.
ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ ಈ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now