Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಂಪ್ಯೂಟರೈಸ್ಡ್ ಅಕೌಂಟಿಂಗ್‍ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

---Advertisement---

ದಾವಣಗೆರೆ. ಆಗಸ್ಟ್ 4:   ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರೈಸ್ಡ್ ಅಕೌಂಟಿಂಗ್(ಜಿಎಸ್‍ಟಿ ಟ್ಯಾಲಿ) ಕುರಿತ 38 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ 23 ರಿಂದ ಹಮ್ಮಿಕೊಳ್ಳಲಾಗಿದೆ.

 

ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದು.   ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ, ವಸತಿ ನೀಡಲಾಗುವುದು. ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9481506564, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment