ಚಿತ್ರದುರ್ಗ, ಜುಲೈ09 :ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ಜಿಲ್ಲಾಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕøತಿಕ ಹಾಗೂ ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಪ್ರತಿ ಕ್ಷೇತ್ರದಲ್ಲಿ ಇಬ್ಬರಂತೆ ಒಟ್ಟು 8 ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಆಯ್ಕೆ ಮಾಡಲು ಮಾನದಂಡಗಳು: 5 ರಿಂದ 18 (ಜುಲೈ 31ರಂತೆ) ವರ್ಷದೊಳಗಿರಬೇಕು. ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ ಮತ್ತು ಕಲೆ, ಸಾಂಸ್ಕøತಿಕ, ಸಂಗೀತ ಈ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರತಿಭೆ ಹೊಂದಿರಬೇಕು. ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿದ ವಯಸ್ಸಿನ ಬಗ್ಗೆ ಜನನ ಪ್ರಮಾಣ ಪತ್ರದ ಪ್ರತಿ ಲಗತ್ತಿಸಬೇಕು. ಪ್ರತಿಭೆಯನ್ನು ಹೊಂದಿರುವ ಬಗ್ಗೆ ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಪತ್ರಿಕೆ ತುಣುಕು ಅಥವಾ ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು. ಅಂತರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುವ ಮಾಹಿತಿ, ಸಾಧಿಸಿರುವ ಪ್ರತಿಭೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಸಲ್ಲಿಸಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ನೆಲಸಿರಬೇಕು.
ಆಸಕ್ತರು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯೊಂದಿಗೆ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದ ಸಮಿತಿಯಲ್ಲಿ ಪ್ರಶಸ್ತಿಗಾಗಿ ಮಕ್ಕಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಆವರಣ, ಚಿತ್ರದುರ್ಗ ಇಲ್ಲಿ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
==========
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
**********
ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ09:
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತೇಜಿಸಲು ಹಾಗೂ ಈ ಕಾರ್ಯಕ್ರಮದಡಿ ಪ್ರಯೋಜನ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ (ಎಸ್‍ಎಸ್‍ಪಿ) ಅರ್ಜಿ ಸಲ್ಲಿಸಬೇಕಾಗಿರುತ್ತದೆ. ssp.postmatric.karanataka.gov.in/www.tw.kar.nic.in ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







