Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Facebook
Twitter
Telegram
WhatsApp

ಚಿತ್ರದುರ್ಗ,(ಅ. 28) : ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ನೀಡುವ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾμÉ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ’ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಜಿಲ್ಲಾ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.  ತರಬೇತಿಯ ಅವಧಿ ವೇಳೆ ಮಾಹೆಯಾನ 15,000/- ರೂ. ಗಳ ಸ್ಟೈಫೆಂಡ್ ನೀಡಲಾಗುವುದು. ತರಬೇತಿಯು 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.  ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ.

ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದುರುಗಿಸುವುದಿಲ್ಲ.  ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿದ್ದು, ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ತುಕಾರಾಂರಾವ್ ಬಿ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

error: Content is protected !!