Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ಎಂ.ವಿ.ಎ ಸ್ನಾತಕೋತ್ತರ ಕೋರ್ಸ್‌ಗೆ ಅರ್ಜಿ ಆಹ್ವಾನ: ಜುಲೈ 31 ಕೊನೆಯ ದಿನ

---Advertisement---

ದಾವಣಗೆರೆ, ಜುಲೈ.24 : ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು ಸಿದ್ದಾರ್ಥನಗರ ಮೈಸೂರು ವತಿಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಬಿ.ವಿ.ಎ/ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಕಚೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 31 ರೊಳಗಾಗಿ ಸಲ್ಲಿಸಬೇಕು.
ಎಂ.ವಿ.ಎ. ಸ್ನಾತಕೋತ್ತರ ಪದವಿಯು ದೃಶ್ಯಕಲೆಯಲ್ಲಿ ಎರಡು ವರ್ಷಗಳ ನಾಲ್ಕು ಸೆಮಿಸ್ಟರ್ ಸಿಬಿಸಿಎಸ್ ಪದ್ಧತಿಯ ಕೋರ್ಸು ಆಗಿದ್ದು, ಈ ಸ್ನಾತಕೋತ್ತರ ಪದ್ಧತಿಯು ಚಿತ್ರಕಲೆ , ಶಿಲ್ಪಕಲೆ ಮತ್ತು ಅಚ್ಚುಕಲೆ, ವಿಷಯಗಳಲ್ಲಿ ವಿಶೇಷ ಅಧ್ಯಯನವನ್ನು ಒಳಗೊಂಡಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2438931 ಸಂಪರ್ಕಿಸಬಹುದೆಂದು ಕಾಲೇಜಿನ ಡೀನ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now