ದಾವಣಗೆರೆ : 2026–27ನೇ ಸಾಲಿನಲ್ಲಿ ಪೂರ್ಣಾವಧಿ ಪಿಎಚ್.ಡಿ. ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ ಅಥವಾ ಫೆಲೋಶಿಪ್‌ಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಮತ್ತು 3(ಬಿ) ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 2026 ಜನವರಿ 9 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್.ಡಿ. ಅಧ್ಯಯನ ಆರಂಭಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ ಹಾಗೂ ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳು ಅಥವಾ ಅವುಗಳ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಮೊದಲ ವರ್ಷದ ಪಿಎಚ್.ಡಿ. ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಡಿಸೆಂಬರ್ 17 ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://bcwd.karnataka.gov.in ಜಾಲತಾಣ ಅಥವಾ ದೂರವಾಣಿ ಸಂಖ್ಯೆ :8050770004 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










