Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಶಿಂಪಿ ಸಮಾಜದವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜೂ. 15 : ಚಿತ್ರದುರ್ಗ ಜಿಲ್ಲಾ ಲಿಂಗಾಯಿತ ಶಿವಶಿಂಪಿ ಸಮಾಜದವತಿಯಿಂದ, ಕುಲಗುರು ಶಿವದಾಸಿಮಯ್ಯನವರ ಜಯಂತೋತ್ಸವದ ಅಂಗವಾಗಿ ಚಿತ್ರದುರ್ಗ ಜಿಲ್ಲೆಯ ಶಿವಶಿಂಪಿ ಸಮಾಜದ ಪ್ರತಿಭಾವಂತ  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಲಿಂಗಾಯಿತ ಶಿವಶಿಂಪಿ ಸಮಾಜದ ಕಾರ್ಯದರ್ಶಿ ಮಲ್ಲಿಕಾರ್ಜನ್ ತಿಳಿಸಿದ್ದಾರೆ.

2023-24, 2024-25 ಮತ್ತು 2025-26 ಶೈಕ್ಷಣಿಕ ವರ್ಷದ ಸಾಲಿನಲ್ಲಿ ಶೇಕಡಾ 85ಕ್ಕಿಂತಲೂ ಹೆಚ್ಚು ಅಂಕಗಳಿಸಿ ಮೊದಲನೇ ಪ್ರಯತ್ನದಲ್ಲಿ ಪಾಸಾದ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪರಸ್ಕಾರಕ್ಕೆ ಅರ್ಜಿಯನ್ನು ಕರೆಯಲಾಗಿದೆ.

ವಿದ್ಯಾರ್ಥಿಗಳು ಸ್ವ ವಿಳಾಸದ ಅರ್ಜಿಯೊಂದಿಗೆ ಅಂಕಪಟ್ಟಿ ಮತ್ತು ಆಧಾರ್ ಕಾರ್ಡಿನ ಜೆರಾಕ್ಸ ಪ್ರತಿ ಹಾಗೂ ಒಂದು ಪಾಸ್ ಪೋರ್ಟ ಸೈಜ್ ಭಾವಚಿತ್ರ, ದೂರವಾಣಿ ಸಂಖ್ಯೆಯೊಂದಿಗೆ ಅರ್ಜಿಯನ್ನು ಅಧ್ಯಕ್ಷರು, ಚಿತ್ರದುರ್ಗ ಜಿಲ್ಲಾ ಲಿಂಗಾಯಿತ ಶಿವಶಿಂಪಿ ಸಮಾಜ, ಅನುಗ್ರಾಫಿಕ್ಸ್, ಧರ್ಮಶಾಲ ರಸ್ತೆ ಚಿತ್ರದುರ್ಗ. ಅರ್ಜಿಯನ್ನು ದಿನಾಂಕ 10/7/2026 ರೊಳಗಾಗಿ ಸಲ್ಲಿಸತಕ್ಕದ್ದು ಹೆಚ್ಚಿನ ಮಾಹಿತಿಗಾಗಿ 9448930040 ಸಂಪರ್ಕಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now