Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ

---Advertisement---

 

ಚಿತ್ರದುರ್ಗ, ಜೂನ್. 11:   2026-27ನೆ ಸಾಲಿಗೆ ಕೃಷೋನ್ನತಿ-ಕೃಷಿ ವಿಸ್ತರಣೆ (ಆತ್ಮ) ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಕೃಷಿ ಇಲಾಖೆಯಲ್ಲಿ ಹೊಸದಾಗಿ 6 ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

 

ಮೊಳಕಾಲ್ಮೂರು ತಾಲ್ಲೂಕು ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಒಂದರಂತೆ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬಬ್ಬೂರು ಫಾರಂಗೆ ಒಂದು ಹುದ್ದೆ ಸೇರಿದಂತೆ ಒಟ್ಟು 6 “ಸಹಾಯಕ ತಾಂತ್ರಿಕ ವ್ಯವಸ್ಥಾಪಕರ” ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಕೃಷಿ/ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕೃಷಿ/ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 1 ವರ್ಷದ ಕ್ಷೇತ್ರ ಮಟ್ಟದ ಅನುಭವ ಹೊಂದಿರಬೇಕು. ಅರ್ಜಿದಾರರು 10.06.2026ಕ್ಕೆ 45 ವರ್ಷದೊಳಗಿರಬೇಕು. ವೇತನ ಮಾಹೆಯಾನ ರೂ. 25,000/- ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಆತ್ಮ ವಿಭಾಗ, ಜಂಟಿ ಕೃಷಿ ನಿರ್ದೇಶಕರ ಕಛೇರಿ, ಚಿತ್ರದುರ್ಗ ಇಲ್ಲಿ ಅರ್ಜಿಯನ್ನು ಪಡೆದು, ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಪೂರ್ಣ ಮಾಹಿತಿಯೊಂದಿಗೆ ದಿನಾಂಕ:30.06.2026 ಸಂಜೆ 5ರ ಒಳಗಾಗಿ ಮುದ್ದಾಂ / ನೊಂದಣೆ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು, ಆತ್ಮ ವಿಭಾಗ ಚಿತ್ರದುರ್ಗ ಇವರಿಗೆ ಅರ್ಜಿ ಸಲ್ಲಿಸಲು ಸೂಚಿಸಿದ್ದು, ತಡವಾಗಿ ಬಂದ ಅರ್ಜಿಗಳನ್ನು ಸ್ವಿಕರಿಸಲಾಗುವುದಿಲ್ಲ. ಅರ್ಜಿಯೊಂದಿಗೆ ವಿದ್ಯಾರ್ಹತೆ ಸಂಬಂಧಿಸಿದಂತೆ ಎಲ್ಲಾ ವರ್ಷದ ಅಂಕಪಟ್ಟಿಗಳು, ಅನುಭವ ಪ್ರಮಾಣ ಪತ್ರಗಳು, ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಲಗತ್ತಿಸುವುದು ಕಡ್ಡಾಯವಾಗಿರುತ್ತದೆ ಮತ್ತು ಎಲ್ಲಾ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆತ್ಮ ವಿಭಾಗ, ಜಂಟಿ ಕೃಷಿ ನಿರ್ದೇಶಕರ ಕಛೇರಿ, ಚಿತ್ರದುರ್ಗ ಇಲ್ಲಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now